ಮಂಗಳವಾರ, ಮೇ 18, 2021
24 °C

ಜನ ನಮ್ಮನ್ನು ಆಶೀರ್ವದಿಸಿ ಮತ್ತೆ ಅಧಿಕಾರ ನೀಡಿದ್ದಾರೆ: ಸರ್ಬಾನಂದ್‌ ಸೊನೊವಾಲ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

ಗುವಾಹಟಿ: ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಸರ್ಬಾನಂದ್‌ ಸೊನೊವಾಲ್‌ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಪಕ್ಷವು ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದ ಜನ ನಮ್ಮನ್ನು ಆಶೀರ್ವದಿಸಿದ್ದಾರೆ. ಮತ್ತೆ ಅಧಿಕಾರ ನೀಡಿದ್ದಾರೆ’ ಎಂದು ಹೇಳಿದ್ದಾರೆ.

ಲೈವ್ ಅಪ್‌ಡೇಟ್ಸ್ ಇಲ್ಲಿ ನೋಡಿ: 

ಮಧ್ಯಾಹ್ನ 1 ಗಂಟೆವರೆಗಿನ ಮತ ಎಣಿಕೆ ಪ್ರಕಾರ, ಅಸ್ಸಾಂನಲ್ಲಿ ಬಿಜೆಪಿ 81 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೇವಲ 43 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವುದು ಸಾಧ್ಯವಾಗಿದೆ.

‘ಜನ ನಮ್ಮನ್ನು ಆಶೀರ್ವದಿಸಿದ್ದಾರೆ. ಬಿಜೆಪಿ ಸರ್ಕಾರ ರಚಿಸಲಿದೆ ಎಂಬುದನ್ನು ಖಚಿತವಾಗಿ ಹೇಳಬಲ್ಲೆ. ನಮ್ಮ ಮಿತ್ರಪಕ್ಷಗಳಾದ ಎಜಿಪಿ ಮತ್ತು ಯುಪಿಪಿಎಲ್‌ ಜತೆ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ’ ಎಂದು ಸೊನೊವಾಲ್ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು