ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Exit Poll: ಅಸ್ಸಾಂನಲ್ಲಿ ಬಿಜೆಪಿಗೆ ಬಹುಮತ ನಿಶ್ಚಿತ: 4 ಸಮೀಕ್ಷೆಗಳ ಅಭಿಮತ

Last Updated 30 ಏಪ್ರಿಲ್ 2021, 9:53 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನ 15ನೇ ವಿಧಾನಸಭೆಗೆ ನಡೆದ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಬಹುತೇಕ ಸಮೀಕ್ಷೆಗಳು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.

ಇಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಲು 64 ಸ್ಥಾನಗಳು ಬೇಕು. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 73 ಸ್ಥಾನ ಗೆದ್ದರೆ, ಕಾಂಗ್ರೆಸ್ ನೇತೃತ್ವದ ಯುಪಿಎ ಹತ್ತಿರತ್ತಿರ 52 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು 4 ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಇಂಡಿಯಾ ಟುಡೇ ಮತ್ತು ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯು ಬಿಜೆಪಿಗೆ ಸಂಪೂರ್ಣ ಬಹುಮತ ಸಿಗಲಿದೆ ಎಂದು ಹೇಳಿದ್ದು, 75–85 ಸ್ಥಾನ ಗೆಲ್ಲಲಿದೆ ಎಂದಿದೆ. ಯುಪಿಎ 40–50 ಸ್ಥಾನ ಗಳಿಸಬಹುದು ಎಂದು ಕೇಳಿದೆ.

ಟುಡೇಸ್ ಚಾಣಾಕ್ಯ ಸಮೀಕ್ಷೆಯು ಬಿಜೆಪಿಗೆ 70 ಮತ್ತು ಕಾಂಗ್ರೆಸ್‌ಗೆ 50 ಸ್ಥಾನ ಕೊಟ್ಟಿದೆ.

ದಿ ರಿಪಬ್ಲಿಕ್ ಮತ್ತು ಸಿಎನ್‌ಎಕ್ಸ್ ಸಮೀಕ್ಷೆಯು ಬಿಜೆಪಿ 60–66 ಸ್ಥಾನ, ಕಾಂಗ್ರೆಸ್ 26–28 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.

ಇನ್ನು, ಟೈಮ್ಸ್ ನೌ–ಸಿ ವೋಟರ್ ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 65, ಕಾಂಗ್ರೆಸ್ ನೇತೃತ್ವದ ಕಾಂಗ್ರೆಸ್‌ 52 ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT