ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ಅರಣ್ಯ ಪ್ರದೇಶದ 3,400 ಹೆಕ್ಟೇರ್‌ ಅತಿಕ್ರಮಣ ತೆರವು

Last Updated 27 ಜೂನ್ 2021, 7:06 IST
ಅಕ್ಷರ ಗಾತ್ರ

ಗುವಾಹಟಿ: ‘2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ 3,400 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶವನ್ನು ಅತಿಕ್ರಮಣಕಾರರಿಂದ ರಕ್ಷಿಸಲಾಗಿದೆ. 2969ಕ್ಕೂ ಹೆಚ್ಚು ಅಕ್ರಮ ಕಾಮಗಾರಿಗಳನ್ನು ತೆರವುಗೊಳಿಸಿದೆ. ಅಲ್ಲದೆ ಈ ಸಂಬಂಧ 194 ಮಂದಿಯನ್ನು ಬಂಧಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಸಂಬಂಧ ಶನಿವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅಸ್ಸಾಂ ಪರಿಸರ ಮತ್ತು ಅರಣ್ಯ ಸಚಿವ ಪರಿಮಲ್ ಸುಕ್ಲಾಬೈದ್ಯ ಅವರು,‘ಅರಣ್ಯ ಪ್ರದೇಶಗಳು, ವನ್ಯಜೀವಿ ಅಭಯಾರಣ್ಯಗಳು, ರಾಷ್ಟ್ರೀಯ ಉದ್ಯಾನಗಳಿಗೆ ಮೀಸಲಿಟ್ಟ ಸ್ಥಳಗಳಿಂದ ಅತಿಕ್ರಮಣಗಳನ್ನು ತೆರವುಗೊಳಿಸಲಾಗಿದೆ. ಈ ರೀತಿಯ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಈ ವರ್ಷ ಏಪ್ರಿಲ್‌– ಜೂನ್‌ 23ರೊಳಗೆ 915.05 ಹೆಕ್ಟೇರ್‌ ಭೂಮಿಯಿಂದ ಅತಿಕ್ರಮಣಗಳನ್ನು ತೆರವುಗೊಳಿಸಲಾಗಿದೆ. ಅಸ್ಸಾಂ ಕೆಳ ವಲಯದಲ್ಲಿ 185.55 ಹೆಕ್ಟೇರ್‌, ಮೇಲಿನ ವಲಯದಲ್ಲಿ 2.5 ಹೆಕ್ಟೇರ್‌, ಕಾರ್ಬಿ ಆಂಗ್ಲಾಂಗ್ ಪಶ್ಚಿಮ ವಿಭಾಗದಲ್ಲಿ 615 ಹೆಕ್ಟೇರ್‌, ಕಾರ್ಬಿ ಆಂಗ್ಲಾಂಗ್ ಪೂರ್ವ ವಿಭಾಗದಲ್ಲಿ 50 ಹೆಕ್ಟೇರ್‌, ಕೊಕ್ರಜಾರ್‌ ಹಲ್ತುಗಾಂವ್ 40 ಹೆಕ್ಟೇರ್‌ ಮತ್ತು ಒರಾಂಗ್ ರಾಷ್ಟ್ರೀಯ ಉದ್ಯಾನದಲ್ಲಿ ಸುಮಾರು 22 ಹೆಕ್ಟೇರ್‌ ತೆರವುಗೊಳಿಸಲಾಗಿದೆ’ ಎಂದು ಇಲಾಖೆಯು ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.

‘ರಾಜ್ಯದಲ್ಲಿ ಹಸಿರು ವ್ಯಾಪ್ತಿಯನ್ನು ವಿಸ್ತರಿಸಲು ಬೃಹತ್‌ ಅರಣ್ಯೀಕರಣ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಮಾಜಿಕ ಅರಣ್ಯ ವಿಭಾಗವು ಈ ಕ್ರಿಯಾ ಯೋಜನೆಯನ್ನು ಕೈಗೆತ್ತಿಕೊಂಡಿದೆ ಎಂದು ಪ್ರಕಟಣೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT