ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ಕೋವಿಡ್ ಕೇಂದ್ರದಲ್ಲಿ ವೈದ್ಯನ ಮೇಲೆ ನಿರ್ದಯ ಹಲ್ಲೆ; 24 ಆರೋಪಿಗಳ ಬಂಧನ

ಅಕ್ಷರ ಗಾತ್ರ

ಗುವಾಹಟಿ: ಕೋವಿಡ್ ಚಿಕಿತ್ಸಾ ಕೇಂದ್ರವೊಂದರಲ್ಲಿ ಯುವ ವೈದ್ಯನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು 24 ಆರೋಪಿಗಳನ್ನು ಬಂಧಿಸಿದ್ದಾರೆ.

ಅಸ್ಸಾಂನ ಹೊಜೈ ಜಿಲ್ಲೆಯ ಒಡಾಲಿಯದ ಮಾಡೆಲ್ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದ್ದು, ಕೋವಿಡ್ ಸೋಂಕಿತನ ನಿಧನದ ನಂತರ ರೋಗಿಯ ಕುಟುಂಬದ ಸದಸ್ಯರು ಯುವ ವೈದ್ಯರನ್ನು ಕ್ರೂರವಾಗಿ ಥಳಿಸಿದ್ದರು.

ವೈದ್ಯರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ 24 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಈ ಕ್ರೂರ ಕೃತ್ಯದಲ್ಲಿ ಭಾಗಿಯಾಗಿರುವ 24 ಮಂದಿ ಅಪರಾಧಿಗಳನ್ನು ಬಂಧಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್‌ಶೀಟ್ ದಾಖಲಿಸಲಾಗುವುದು. ನಾನು ಈ ತನಿಖೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ನ್ಯಾಯ ಒದಗಿಸುವ ಭರವಸೆ ನೀಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ಹೇಳಿದ್ದಾರೆ.

ಹಲ್ಲೆಗೊಳಗಾದ ವೈದ್ಯರನ್ನು ಸೆಯುಜ್ ಕುಮಾರ್ ಸೇನಾಪತಿ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಕೋವಿಡ್ ಸೋಂಕಿತ ಮೃತಪಟ್ಟ ಬೆನ್ನಲ್ಲೇ ಆಕ್ರೋಶಗೊಂಡಿರುವ ಸಂಬಂಧಿಕರು ವೈದ್ಯರ ಮೇಲೆ ಏಕಾಏಕಿ ದಾಳಿ ನಡೆಸಿ ಥಳಿಸಿದ್ದರು. ಇದರಿಂದಾಗಿ ಯುವ ವೈದ್ಯ ಗಂಭೀರ ಗಾಯಗೊಂಡಿದ್ದರು.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಲ್ಲದೆ ವೈದ್ಯಕೀಯ ಜಗತ್ತು ಸೇರಿದಂತೆ ಎಲ್ಲ ವಿಭಾಗದಿಂದಲೂ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಬಳಿಕ ಪ್ರತಿಕ್ರಿಯಿಸಿರುವ ಡಾ. ಸೆಯುಜ್ ಕುಮಾರ್ ಸೇನಾಪತಿ, ರೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ಸಂಬಂಧಿಕರು ನನ್ನ ಬಳಿ ಹೇಳಿದ್ದರು. ನಾನು ರೋಗಿಯನ್ನು ಪರೀಕ್ಷಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂಬುದು ತಿಳಿದು ಬಂದಿದೆ. ರೋಗಿಯ ಸಂಬಂಧಿಕರು ಆಸ್ಪತ್ರೆಯ ಪಿಠೋಪಕರಣಗಳನ್ನು ಧ್ವಂಸ ಮಾಡಿ ನನ್ನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದರುಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT