ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ಶರಣಾದ 46ಕ್ಕೂ ಹೆಚ್ಚು ಆದಿವಾಸಿ ಬಂಡುಕೋರರು

Last Updated 22 ಜನವರಿ 2023, 16:05 IST
ಅಕ್ಷರ ಗಾತ್ರ

ತೇಜ್‌ಪುರ: ಅಸ್ಸಾಂನ ಆದಿವಾಸಿ ನ್ಯಾಷನಲ್ ಲಿಬರೇಷನ್ ಆರ್ಮಿಯ 46ಕ್ಕೂ ಹೆಚ್ಚು ಬಂಡುಕೋರರು ಭಾನುವಾರ ಶರಣಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಸೋನಿತ್‌ಪುರ ಜಿಲ್ಲೆಯ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಹಿರಿಯ ಪೊಲೀಸ್‌ ಅಧಿಕಾರಗಳ ಸಮ್ಮುಖದಲ್ಲಿ ಶರಣಾಗಿದ್ದಾರೆ. ಇದೇ ವೇಳೆ ತಮ್ಮ ಬಳಿ ಇದ್ದ 8 ರೈಫಲ್‌ಗಳು, 6 ಪಿಸ್ತೂಲ್‌ಗಳು, 2 ಕಾರ್ಬೈನ್‌ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಳೆದ 4 ತಿಂಗಳ ಹಿಂದೆ ಅಸ್ಸಾಂ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರು. ಇದೀಗ ಶರಣಾಗಿರುವ ಎಲ್ಲರಿಗೂ ಕಾನೂನು ರೀತಿಯಲ್ಲಿ ಪರಿಹಾರ ನೀಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT