ಗುವಾಹಟಿ: ‘ಅಸ್ಸಾಂನಿಂದ ಕೇರಳಕ್ಕೆ ಮಾನವ ಕಳ್ಳಸಾಗಣೆ ಮಾಡಿದ್ದ ಒಂಬತ್ತು ಬಾಲಕಿಯರನ್ನು ಅಸ್ಸಾಂ ಪೊಲೀಸರು ರಕ್ಷಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯರನ್ನು ಮರಳಿ ಅಸ್ಸಾಂಗೆ ಕರೆತರಲಾಗುತ್ತಿದೆ ಎಂದು ವಿಶೇಷ ಪೊಲೀಸ್ ಮಹಾನಿರ್ದೇಶಕ ಜಿ.ಪಿ. ಸಿಂಗ್ ಅವರು ಹೇಳಿದ್ದಾರೆ.
‘ಅಸ್ಸಾಂನಿಂದ ಕಾರ್ಯ ನಿರ್ವಹಿಸುತ್ತಿರುವ ಅಕ್ರಮವಾಗಿ ಮಾನವ ಕಳ್ಳಸಾಗಣೆಯ ದಂಧೆಯ ಕುರಿತು ಹೂಜೈ ಪೊಲೀಸರಿಂದ ಮಾಹಿತಿ ಬಂದಿತ್ತು. ಇದರಲ್ಲಿ ಅಸ್ಸಾಂನ ವಿವಿಧ ಜಿಲ್ಲೆಗಳಿಗೆ ಸೇರಿದ ಬಾಲಕಿಯರಿದ್ದರು. ಇವರನ್ನು ಕೇರಳದ ತಂಪನೂರುಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು’ ಎಂದು ಸಿಂಗ್ ಅವರು ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ.
‘ಖಚಿತ ಮಾಹಿತಿಯ ಮೇರೆಗೆ ಜುಲೈ 11ರಂದು ಹೂಜೈ ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಕಾಯ್ದೆಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಂಟು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ ತಂಡವು ಜುಲೈ 13ಕ್ಕೆ ಕೇರಳಕ್ಕೆ ತೆರಳಿ ಅಲ್ಲಿ ಸಂತ್ರಸ್ತೆಯರನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು’ ಎಂದು ಸಿಂಗ್ ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.