ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ; ಮತಗಟ್ಟೆಯೊಂದರಲ್ಲಿ ಮರುಮತದಾನ ಆದೇಶ

Last Updated 2 ಏಪ್ರಿಲ್ 2021, 8:25 IST
ಅಕ್ಷರ ಗಾತ್ರ

ನವದೆಹಲಿ: ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಮುಕ್ತಾಯವಾದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರ ಕಾರಿನಲ್ಲಿ ಇವಿಎಂಗಳನ್ನು ಸಾಗಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರತಬಾರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮರುಚುನಾವಣೆ ನಡೆಸಲು ಚುನಾವಣಾ ಆಯೋಗ ಶುಕ್ರವಾರ ಆದೇಶಿಸಿದೆ.

ಮತಗಟ್ಟೆ ಅಧಿಕಾರಿ ಮತ್ತು ಇತರೆ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.

'ಇವಿಎಂಗಳಿಗೆ ಯಾವುದೇ ಹಾನಿಯಾಗದಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಮತಗಟ್ಟೆ ಸಂಖ್ಯೆ 149ರಲ್ಲಿ ಮರುಮತದಾನ ನಡೆಸಲಾಗುತ್ತದೆ' ಎಂದು ಚುನಾವಣಾ ಆಯೋಗ ಹೇಳಿದೆ.

ಮತಗಟ್ಟೆ ಅಧಿಕಾರಿಗಳು ಇವಿಎಂ ಯಂತ್ರಗಳನ್ನು ಅಧಿಕೃತ ವಾಹನದಲ್ಲಿ ಸಾಗಿಸುವಾಗ ಅವರ ಕಾರು ಮಾರ್ಗ ಮಧ್ಯೆ ಕೆಟ್ಟು ನಿಂತಿದೆ. ಹೀಗಾಗಿ ಹಿಂದೆ ಬರುತ್ತಿದ್ದ ವಾಹನದ ಸಹಾಯ ಕೋರಿ ಆ ವಾಹನದಲ್ಲಿ ಸಂಚಾರ ಮುಂದುವರಿಸಿದ್ದರು ಎಂದು ವರದಿಯಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಮತ್ತು ಎಐಯುಡಿಎಫ್ ಬೆಂಬಲಿಗರು ಸ್ಥಳಕ್ಕೆ ಆಗಮಿಸಿದ್ದರಿಂದಾಗಿ ಹಿಂಸಾಚಾರ ಭುಗಿಲೆದ್ದಿತ್ತು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT