ಶನಿವಾರ, ಮೇ 15, 2021
22 °C

ಪಂಚ ರಾಜ್ಯ ಚುನಾವಣಾ ಫಲಿತಾಂಶ: ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ

ಪಿಟಿಐ‌ Updated:

ಅಕ್ಷರ ಗಾತ್ರ : | |

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ದಿನ ಯಾವುದೇ ಟಿವಿ ಚರ್ಚೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಿರಲು ಕಾಂಗ್ರೆಸ್ ನಿರ್ಧರಿಸಿದೆ.

ದೇಶದಲ್ಲಿ ಗಂಭೀರ ಕೋವಿಡ್ ಪರಿಸ್ಥಿತಿ ಇರುವುದರಿಂದ ಪಕ್ಷದ ವಕ್ತಾರರು ಫಲಿತಾಂಶದ ಬಳಿಕದ ಟಿವಿ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲ ಹೇಳಿದ್ದಾರೆ.

ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು (ಮೇ 2) ಪ್ರಗತಿಯಲ್ಲಿದೆ.

‘ದೇಶವು ಹಿಂದೆಂದೂ ಕಂಡಿರದಂತಹ ಬಿಕ್ಕಟ್ಟು ಎದುರಿಸುತ್ತಿರುವಾಗ, ಮೋದಿ ಸರ್ಕಾರ ವಿಫಲವಾಗಿರುವಾಗ, ನಾವು ಅವರನ್ನು ಹೊಣೆಗಾರರನ್ನಾಗಿ ಮಾಡದಿರುವುದು ಸ್ವೀಕಾರಾರ್ಹವಲ್ಲ. ಚುನಾವಣಾ ಗೆಲುವು ಮತ್ತು ಸೋಲಿನ ಬಗ್ಗೆ ಚರ್ಚಿಸಲು ಸಮಯವಲ್ಲ. ಹೀಗಾಗಿ ಕಾಂಗ್ರೆಸ್ ವಕ್ತಾರರು ಮಾಧ್ಯಮ ಚರ್ಚೆಗಳಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ.

‘ಮಾಧ್ಯಮದ ಸ್ನೇಹಿತರು ಕೇಳುವ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ನಾವು ಲಭ್ಯರಿರುತ್ತೇವೆ. ಚುನಾವಣೆಯಲ್ಲಿ ನಾವು ಗೆಲ್ಲಬಹುದು ಅಥವಾ ಸೋಲಬಹುದು, ಆದರೆ ಜನರು ಆಮ್ಲಜನಕ, ಹಾಸಿಗೆಗಳು, ಔಷಧಗಳು, ವೆಂಟಿಲೇಟರ್‌ಗಳಿಗಾಗಿ ಮೊರೆಯಿಡುತ್ತಿರುವಾಗ ಅವರ ಜತೆ ನಿಲ್ಲಬೇಕಿರುವುದು ಹಾಗೂ ಅವರಿಗೆ ನೆರವು ನೀಡಬೇಕಾದ್ದು ನಮ್ಮ ಕರ್ತವ್ಯ’ ಎಂದು ಅವರು ಹೇಳಿದ್ದಾರೆ.

ಮತಗಟ್ಟೆ ಸಮೀಕ್ಷೆಗಳ ಪ್ರಕಾರ ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು