ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ಹಿಂದೂ ಧರ್ಮಕ್ಕೆ ಮರಳಿದ 142 ಕ್ರಿಶ್ಚಿಯನ್ ಕುಟುಂಬಗಳು

Last Updated 28 ಫೆಬ್ರುವರಿ 2023, 7:12 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ 142 ಕ್ರಿಶ್ಚಿಯನ್ ಕುಟುಂಬಗಳು ಹಿಂದೂ ಧರ್ಮಕ್ಕೆ ಮರಳಿವೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಅವರ ನೀತಿಗಳಿಂದ ಪ್ರೇರಿತರಾಗಿ 142 ಕ್ರಿಶ್ಚಿಯನ್ ಕುಟುಂಬಗಳು ಮತ್ತೆ ಹಿಂದೂ ಧರ್ಮಕ್ಕೆ ಮರಳಿವೆ. ಹಲವು ದಶಕಗಳ ಹಿಂದೆ ಈ ಕುಟುಂಬಗಳು ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದವು.

ಮರಿಗಾಂವ್‌ ವಿಧನಾಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಶಾಸಕ ಪಿಯೂಷ್ ಹಜಾರಿಕಾ ಅವರ ಸಮ್ಮುಖದಲ್ಲಿ ಕ್ರಿಶ್ಚಿಯನ್ ಕುಟುಂಬಗಳು ಹಿಂದೂ ಧರ್ಮಕ್ಕೆ ಮರಳಿದವು ಎಂದು ಇಂಡಿಯಾ ಟುಡೇ ವೆಬ್‌ಸೈಟ್ ವರದಿ ಮಾಡಿದೆ.

ಇಲ್ಲಿನ ತಿವಾಶಾಂಗ್‌ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮತಾಂತರ ನಡೆದಿದೆ.

ತಿವಾ ಬುಡುಕಟ್ಟು ಜನಾಂಗದ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳು ಮತ್ತೆ ಹಿಂದೂ ಧರ್ಮಕ್ಕೆ ಮರಳುತ್ತಾರೆ. ಅವರು ಹಿಂದೂ ಧರ್ಮಕ್ಕೆ ಮರಳುವ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಹಜಾರಿಕಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT