ಗುರುವಾರ , ಜೂನ್ 30, 2022
27 °C

ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಿ ನಟ ದಿಲೀಪ್ ಸ್ನೇಹಿತ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ನಟಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದಿಲೀಪ್ ಅವರ ಸ್ನೇಹಿತ ಹಾಗೂ ಹೋಟೆಲ್ ಮಾಲೀಕ ಶರತ್ ಜಿ ನಾಯರ್ ಅವರನ್ನು ಕೇರಳ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ನಾಯರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಿಲೀಪ್ ಜಾಮೀನು ಪಡೆದ ನಂತರ ಅವರ ಮನೆಗೆ ನಾಯರ್ ಭೇಟಿ ನೀಡಿದ ಬಗ್ಗೆ ಚಲನಚಿತ್ರ ನಿರ್ದೇಶಕ ಬಾಲಚಂದ್ರಕುಮಾರ್ ನೀಡಿದ ಹೇಳಿಕೆ ಆಧರಿಸಿ ಈ ಬಂಧನ ನಡೆದಿದೆ.

ನಟ ದಿಲೀ‍ಪ್ ಅವರು ನಟಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಸಂಚು ರೂಪಿಸಿದ್ದ ಆಡಿಯೊ ಟಿವಿಗಳಲ್ಲಿ ಪ್ರಸಾರವಾದ ಬಳಿಕ ಅದನ್ನು ಆಧರಿಸಿ ದಿಲೀಪ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಉದ್ದೇಶಪೂರ್ವಕವಾಗಿ ತನ್ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಸಲು ತನಿಖಾಧಿಕಾರಿ ಯತ್ನಿಸಿದ್ದಾರೆ ಎಂದು ದಿಲೀಪ್ ದೂರಿದ್ದರು.

ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ನಟಿಯನ್ನು ಕೆಲವು ಆರೋಪಿಗಳು 2017ರ ಫೆಬ್ರವರಿ 17ರಂದು ರಾತ್ರಿ ವಾಹನದಲ್ಲಿ ಅಪಹರಿಸಿ, ಎರಡು ಗಂಟೆಗಳ ಕಾಲ ಕಾರಿನಲ್ಲಿ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು.

ನಟಿಯನ್ನು ಬ್ಲಾಕ್‌ಮೇಲ್ ಮಾಡಲು ಲೈಂಗಿಕ ದೌರ್ಜನ್ಯದ ಇಡೀ ಕೃತ್ಯವನ್ನು ಚಿತ್ರೀಕರಿಸಿದ್ದರು. ಪ್ರಕರಣದಲ್ಲಿ 10 ಆರೋಪಿಗಳಿದ್ದು, ಆರಂಭದಲ್ಲಿ ಪೊಲೀಸರು ಏಳು ಜನರನ್ನು ಬಂಧಿಸಿದ್ದರು. ನಂತರ ದಿಲೀಪ್ ಅವರನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ನಟ ದಿಲೀಪ್ ಮತ್ತು ನಾಯರ್ ಸೇರಿದಂತೆ ಇತರ ಐವರ ವಿರುದ್ಧ ಐಪಿಸಿಯ ವಿವಿಧ ವಿಧಿಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಓದಿ... ಹುಲಿ ಮರಿಗಳನ್ನು ಸಾಕುತ್ತಿದೆ ಲ್ಯಾಬ್ರಡಾರ್; ನಾಯಿ ಪ್ರೀತಿಗೆ ನೆಟ್ಟಿಗರು ಸಲಾಂ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು