ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ: ಮತದಾನ ಆರಂಭ

Last Updated 3 ನವೆಂಬರ್ 2022, 3:05 IST
ಅಕ್ಷರ ಗಾತ್ರ

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಪ್ರಮುಖವಾಗಿ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ.

ಬಿಹಾರದ ಮೊಕಾಮಾ ಮತ್ತು ಗೋಪಾಲ್‌ಗಂಜ್, ಮಹಾರಾಷ್ಟ್ರದ ಅಂಧೇರಿ (ಪೂರ್ವ), ಹರಿಯಾಣದ ಆದಂಪುರ, ತೆಲಂಗಾಣದ ಮುನುಗೋಡು, ಉತ್ತರ ಪ್ರದೇಶದ ಗೋಲಾ ಗೋರಖ್‌ನಾಥ್ ಮತ್ತು ಒಡಿಶಾದ ಧಾಮ್‌ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

ಮತದಾನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಪಚುನಾವಣೆಯ ಫಲಿತಾಂಶವು ನವೆಂಬರ್ 6ರಂದು ಪ್ರಕಟಗೊಳ್ಳಲಿದೆ.

ಉಪಚುನಾವಣೆ ನಡೆಯುತ್ತಿರುವ ಏಳು ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಮೂರು, ಕಾಂಗ್ರೆಸ್ ಎರಡು, ಶಿವಸೇನಾ ಮತ್ತು ಆರ್‌ಜೆಡಿ ತಲಾ ಒಂದು ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT