ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದಾದ್ಯಂತ ಡಬಲ್ ಎಂಜಿನ್ ಸರ್ಕಾರಗಳು ಗೆಲುವು ಸಾಧಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಣ್ಣಿಸಿದ್ದಾರೆ.

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ನಾವು ಇತಿಹಾಸವನ್ನು ರಚಿಸುತ್ತಿದ್ದೇವೆ. ದೇಶದ ಜನರು‘ಮೆಚ್ಚಿನ ಮಗ’ ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿಟ್ಟಿರುವ ನಂಬಿಕೆಗೆ ಸಾಕ್ಷಿಯಾಗುತ್ತಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಚುನಾವಣಾ ಫಲಿತಾಂಶಗಮನಿಸಿದರೆ ಮತದಾರರು ಪ್ರತಿಪಕ್ಷಗಳ ಆಮಿಷಗಳಿಗೆ ಒಳಗಾಗದೆ ಬಿಜೆಪಿಯ ಅಭಿವೃದ್ಧಿ ರಾಜಕಾರಣದ ಮೇಲೆ ಹೆಚ್ಚು ನಂಬಿಕೆ ಇಟ್ಟಿರುವುದು ಸ್ಪಷ್ಟವಾಗಿದೆ’ ಎಂದು ತಿಳಿಸಿದ್ದಾರೆ.

'ಬಿಜೆಪಿ ವಿಜಯೋತ್ಸವ ಆಚರಿಸಲು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ' ಎಂದು ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ.

ಸದ್ಯ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಪಂಜಾಬ್ ಹೊರತುಪಡಿಸಿ ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಾಖಂಡದಲ್ಲಿ ಬಿಜೆಪಿಗೆ ಬಹುಮತ ದೊರೆಯುವುದು ಬಹುತೇಕ ಖಚಿತವಾಗಿದೆ.

ಓದಿ...Assembly Poll Results Live | ಪಂಚರಾಜ್ಯ ಚುನಾವಣೆ ಫಲಿತಾಂಶ: ಉತ್ತರಾಖಂಡದಲ್ಲಿ ಬಿಜೆಪಿಗೆ ಬಹುಮತ, ಸಿಎಂ ಧಾಮಿ ಹಿನ್ನಡೆ

ಓದಿ...

ಕೆಲವೊಬ್ಬರು ಸುಧಾರಿಸುವುದೇ ಇಲ್ಲ: ಬಿ.ಎಲ್.ಸಂತೋಷ್ ವ್ಯಂಗ್ಯವಾಡಿದ್ದು ಯಾರ ಬಗ್ಗೆ?

ಯುಪಿಯಲ್ಲಿ ಬಿಜೆಪಿಗೆ ಶೇ 38.9, ಪಂಜಾಬ್ನಲ್ಲಿ ಎಎಪಿಗೆ ಶೇ 40.3ರಷ್ಟು ಮತ ಹಂಚಿಕೆ

Uttarakhand Results: ಬಿಜೆಪಿ –ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.