ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ: ಬಿಜೆಪಿ ಮುನ್ನಡೆ- ಸಿಎಂ ಪ್ರಮೋದ್‌ ಸಾವಂತ್‌, ಉಪ ಮುಖ್ಯಮಂತ್ರಿಗೆ ಹಿನ್ನಡೆ

Last Updated 10 ಮಾರ್ಚ್ 2022, 6:48 IST
ಅಕ್ಷರ ಗಾತ್ರ

ಪಣಜಿ: ಗೋವಾದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೂ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಮತ್ತು ಉಪ ಮುಖ್ಯಮಂತ್ರಿ ಚಂದ್ರಶೇಖರ್ ಕಾವ್ಲೇಕರ್‌ ಅವರಿಗೆ ಹಿನ್ನಡೆಯಾಗಿದೆ.

ಬೆಳಗ್ಗೆ 11 ಗಂಟೆಯ ಟ್ರೆಂಡ್ ಪ್ರಕಾರ, ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧರ್ಮೇಶ್ ಸಲ್ಗಾನಿ ಎದುರಿಗೆ ಸಾವಂತ್ ಅವರಿಗೆ 436 ಮತಗಳ ಹಿನ್ನಡೆಯಾಗಿದೆ.

ಕ್ವಿಪೆಮ್ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾವ್ಲೇಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಆಲ್ಟೋನ್ ಡಿ'ಕೋಸ್ಟಾ ಎದುರು 1,422 ಮತಗಳ ಹಿನ್ನಡೆ ಅನುಭವಿಸಿದ್ದಾರೆ.

ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರ್‍ರೀಕರ್‌ ಅವರ ಪುತ್ರ ಉತ್ಪಲ್ ಪರಿಕ್ಕರ್ ಕೂಡ ಬಿಜೆಪಿ ಅಭ್ಯರ್ಥಿ ಅಟಾನಾಸಿಯೊ ಮೊನಸೆರೆಟ ಎದುರು ಹಿನ್ನಡೆ ಅನುಭವಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT