ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌: ಫಲ ನೀಡದ ಪ್ರಿಯಾಂಕಾ ಗಾಂಧಿ ವಾದ್ರಾ ಹೋರಾಟ

Last Updated 10 ಮಾರ್ಚ್ 2022, 19:55 IST
ಅಕ್ಷರ ಗಾತ್ರ

ಲಖನೌ/ಬೆಂಗಳೂರು: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೆಲೆ ಕಳೆದುಕೊಂಡಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಲೋಕಸಭಾ ಕ್ಷೇತ್ರ ರಾಯ ಬರೇಲಿಯಲ್ಲಿ ಬರುವ ಎಲ್ಲಾ ಆರು ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್‌ ಕಳೆದುಕೊಂಡಿದೆ.

ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಭಾರಿ ಹುಮ್ಮಸ್ಸಿನೊಂದಿಗೆ ಕಣಕ್ಕೆ ಇಳಿದಿತ್ತು. ಒಟ್ಟು ಟಿಕೆಟ್‌ಗಳಲ್ಲಿ ಮಹಿಳೆಯರಿಗೆ ಶೇ 40ರಷ್ಟು ಮೀಸಲು, ಮಹಿಳಾ ಸಬಲೀಕರಣ, ಅಭಿವೃದ್ಧಿಯ ಹೊಸ ಮಾದರಿಯನ್ನು ಮುಂದಿಟ್ಟುಕೊಂಡು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರ ನಡೆಸಿದ್ದರು. ಹಲವು ದಶಕಗಳ ನಂತರ ಇದೇ ಮೊದಲ ಬಾರಿಗೆ ಪಕ್ಷವು ರಾಜ್ಯದ ಎಲ್ಲಾ 403 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು.

ಪ್ರಿಯಾಂಕಾ ಗಾಂಧಿ ಅವರ ಪ್ರಚಾರ ಕಾರ್ಯಕ್ರಮಗಳಲ್ಲಿ, ರ‍್ಯಾಲಿಗಳಲ್ಲಿ ಸಾವಿರಾರು ಮಂದಿ ಸೇರುತ್ತಿದ್ದರು. ಪಕ್ಷವು ಈ ಚುನಾವಣೆಯಲ್ಲಿ ತನ್ನ ಮತ ಪ್ರಮಾಣ ಮತ್ತು ಸ್ಥಾನಗಳನ್ನು ಉತ್ತಮಪಡಿಸಿಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಪಕ್ಷದ ಮತಪ್ರಮಾಣ ಅರ್ಧಕ್ಕಿಂತಲೂ ಹೆಚ್ಚು ಕುಸಿದಿದೆ. ಈ ಹಿಂದಿನ ಚುನಾವಣೆಯಲ್ಲಿ ಗೆದ್ದಿದ್ದರಲ್ಲಿ ನಾಲ್ಕು ಸ್ಥಾನಗಳನ್ನು ಕಾಂಗ್ರೆಸ್‌ ಕಳೆದುಕೊಂಡಿದೆ. ಪ್ರಾದೇಶಿಕ ಪಕ್ಷವಾದ ಅಪ್ನಾದಳಕ್ಕಿಂತಲೂ ಕಡಿಮೆ ಸ್ಥಾನಗಳಲ್ಲಿ ಕಾಂಗ್ರೆಸ್‌ ಆರಿಸಿ ಬಂದಿದೆ.

ಕಾಂಗ್ರೆಸ್‌ ಈ ಬಾರಿ ಮಾಡಿದ್ದ ಯಾವ ಚುನಾವಣಾ ತಂತ್ರಗಳೂ ಸಫಲವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT