ಜಮ್ಮು–ಕಾಶ್ಮೀರ: ವರ್ಷಾಂತಕ್ಕೆ ವಿಧಾನಸಭಾ ಚುನಾವಣೆ ಸಾಧ್ಯತೆ

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕ್ಷೇತ್ರಗಳ ವಿಂಗಡಣಾ ಕಾರ್ಯ ಕೆಲವೇ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ವಿಧಾನಸಭಾ ಚುನಾವಣೆ ಈ ವರ್ಷಾಂತ್ಯಕ್ಕೆ ನಡೆಯುವ ಸಾಧ್ಯತೆ ಇದೆ.
‘ಕ್ಷೇತ್ರಗಳ ವಿಂಗಡಣೆಗಾಗಿ ರಚಿಸಲಾಗಿರುವ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾಪ್ರಕಾಶ್ ದೇಸಾಯಿ ನೇತೃತ್ವದ ಆಯೋಗವು ತನ್ನ ವರದಿಯನ್ನು ಕೆಲವೇ ತಿಂಗಳಲ್ಲಿ ಸಲ್ಲಿಸಲಿದೆ. ನಂತರ ಚುನಾವಣಾ ಆಯೋಗವು ಚುನಾವಣೆ ನಡೆಯುವ ದಿನಾಂಕ ಘೋಷಿಸುವುದು’ ಎಂದು ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಕಣಿವೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ, ಜಮ್ಮು–ಕಾಶ್ಮೀರ ಹಾಗೂ ಲಡಾಖ್ ಎಂಬ ಕೇಂದ್ರಾಡಳಿತ ಪ್ರದೇಶಗಳನ್ನು ರಚಿಸಲಾಯಿತು. ಈ ಪೈಕಿ, ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರದಲ್ಲಿ ಮಾತ್ರ ವಿಧಾನಸಭಾ ಕ್ಷೇತ್ರಗಳನ್ನು ಉಳಿಸಿಕೊಳ್ಳಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.