ಶನಿವಾರ, ಏಪ್ರಿಲ್ 1, 2023
29 °C

ಚುನಾವಣೆಗೂ ಮುನ್ನ 900 ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಗುಜರಾತ್‌ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಧಾನಸಭೆ ಚುನಾವಣೆಗೆ ಮುನ್ನ ಗುಜರಾತ್ ಸರ್ಕಾರವು 900ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ವಿಧಾನಸಭೆ ಚುನಾವಣೆಗೂ ಮುನ್ನ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ಕುರಿತು ವರದಿ ಸಲ್ಲಿಸಲು ಗುಜರಾತ್ ಸರ್ಕಾರ ವಿಫಲವಾಗಿದೆ ಎಂದು ಚುನಾವಣೆ ಆಯೋಗ ಇತ್ತೀಚೆಗಷ್ಟೇ ಅಸಮಾಧಾನ ವ್ಯಕ್ತಪಡಿಸಿತ್ತು. ಅದರ ಬೆನ್ನಿಗೇ ಗುಜರಾತ್‌ ಸರ್ಕಾರ ವರ್ಗಾವಣೆ ಪ್ರಕ್ರಿಯೆ ನಡೆಸಿದೆ.

ಇನ್ನೊಂದೆಡೆ, ಆರು ಹಿರಿಯ ಐಪಿಎಸ್ ಅಧಿಕಾರಿಗಳೂ ಸೇರಿದಂತೆ ಇನ್ನೂ 51 ಅಧಿಕಾರಿಗಳು ಇನ್ನಷ್ಟೇ ವರ್ಗವಾಗಬೇಕಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಉಳಿದ ಅಧಿಕಾರಿಗಳು ಆಯಾ ಪ್ರಧಾನ ಕಚೇರಿಗಳಿಗೆ ವರದಿ ಮಾಡಿಕೊಂಡಿರುವುದನ್ನು ಖಚಿತಪಡಿಸಬೇಕು ಎಂದು ಚುನಾವಣಾ ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ. ಅಲ್ಲದೇ, ಗುರುವಾರ ಸಂಜೆ 4.00 ಗಂಟೆಯೊಳಗೆ ವರದಿಯನ್ನು ಕಳುಹಿಸಬೇಕು ಎಂದು ತಾಕೀತು ಮಾಡಿದೆ.

ವರ್ಗಾವಣೆಗೊಂಡ 900ಕ್ಕೂ ಹೆಚ್ಚು ಅಧಿಕಾರಿಗಳು ವಿವಿಧ ದರ್ಜೆಗಳು ಮತ್ತು ಸೇವೆಗಳಲ್ಲಿದ್ದವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮ್ಮ ತವರು ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಒಂದೇ ಜಿಲ್ಲೆಯಲ್ಲಿ ಮೂರು ವರ್ಷ ಕಳೆದಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಯೋಗವು ಗುಜರಾತ್‌ ಸರ್ಕಾರಕ್ಕೆ ಸೂಚಿಸಿತ್ತು. ಅಲ್ಲದೆ, ಈ ಕುರಿತು ವರದಿಯನ್ನೂ ಕೇಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು