ಶನಿವಾರ, ಅಕ್ಟೋಬರ್ 23, 2021
23 °C

ಜಮ್ಮು–ಕಾಶ್ಮೀರ: ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ–ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಮ್ಮು (ಪಿಟಿಐ): ಕ್ಷೇತ್ರಗಳ ಪುನರ್‌ ವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ ವರ್ಷದ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರವೀಂದರ್‌ ರೈನ ಶನಿವಾರ ಹೇಳಿದ್ದಾರೆ. 

ಭಾರತೀಯ ಜನಸಂಘದ ನಾಯಕ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರಿಗೆ ಗೌರವ ಸಲ್ಲಿಸಲು ಬಿಜೆಪಿ  ಕಚೇರಿಯಲ್ಲಿ ಆಯೋಜಿಸಿದ್ದ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ರೈನಾ ಮಾತನಾಡಿ, ಕ್ಷೇತ್ರಗಳ ವಿಂಗಡಣೆ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು ವರ್ಷಾಂತ್ಯದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.