ಭಾನುವಾರ, ನವೆಂಬರ್ 29, 2020
20 °C

ದೆಹಲಿಯಲ್ಲಿ 11.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯಲ್ಲಿ ಭಾನುವಾರ ಬೆಳಿಗ್ಗೆ 11.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಇದು ಈ ಋತುವಿನಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಸಾಮಾನ್ಯವಾಗಿ ನವೆಂಬರ್‌ ಮೊದಲ ವಾರದಲ್ಲಿ15 ರಿಂದ 16 ಡಿಗ್ರಿ ಸೆಲ್ಸಿಯಸ್‌ ದಾಖಲಾಗುತ್ತದೆ. ನವೆಂಬರ್‌ ತಿಂಗಳಾಂತ್ಯದಲ್ಲಿ 11–12 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿರುತ್ತದೆ ಎಂದು ಇಲಾಖೆ ಹೇಳಿದೆ.

‘ಮೋಡ ಕವಿದ ವಾತಾವರಣ ಇಲ್ಲದಿರುವುದು ಮತ್ತು ಶಾಂತ ಗಾಳಿ ಇರುವುದು ಕಡಿಮೆ ತಾಪಮಾನಕ್ಕೆ ಪ್ರಮುಖ ಕಾರಣವಾಗಿದೆ’ ಎಂದು ಸ್ಥಳೀಯ ಐಎಂಡಿ ಕೇಂದ್ರದ ಮುಖ್ಯಸ್ಥ ಕುಲ್‌ದೀಪ್‌ ಶ್ರೀವಾಸ್ತವ್‌ ಅವರು ಮಾಹಿತಿ ನೀಡಿದರು.

ಪರ್ವತ ಪ್ರದೇಶಗಳಲ್ಲಿ ಇನ್ನೂ ಹಿಮಪಾತ ಆರಂಭವಾಗಿಲ್ಲ. ಅದು ಆರಂಭವಾಗುತ್ತಿದ್ದಂತೆ ದೆಹಲಿ ಹವಾಮಾನದ ಮೇಲೆ ಶೀತ ಮಾರುತಗಳೂ ಪ್ರಭಾವ ಬೀರಲಿವೆ ಎಂದು ಅವರು ಹೇಳಿದರು.

ದೆಹಲಿಯಲ್ಲಿ ಗುರುವಾರ 12.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಇದು ಈ ಋತುವಿನಲ್ಲಿ 26 ವರ್ಷಗಳಲ್ಲಿ ದಾಖಲಾದ ಕನಿಷ್ಠ ತಾಪಮಾನ. 1937ರ ಅಕ್ಟೋಬರ್‌ 31ರಂದು 9.4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ವರದಿಯಾಗಿತ್ತು. ಅದು ಈವರೆಗಿನ ಕನಿಷ್ಠ ತಾಪಮಾನವಾಗಿದೆ ಎಂದು ಐಎಂಡಿ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು