ಬುಧವಾರ, ಫೆಬ್ರವರಿ 1, 2023
27 °C

ಉತ್ತರ ಪ್ರದೇಶ: ಅಗ್ನಿ ಅವಘಡ– ಒಂದೇ ಕುಟುಂಬದ 6 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಫಿರೋಜಾಬಾದ್(ಉತ್ತರ ಪ್ರದೇಶ): ಎಲೆಕ್ಟ್ರಾನಿಕ್ಸ್ ಮತ್ತು ಪೀಠೋಪಕರಣಗಳ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಮಳಿಗೆ ಮಾತ್ರವಲ್ಲದೆ, ಬೆಂಕಿ ಮೊದಲ ಮಹಡಿಯ ಮಾಲೀಕರ ಮನೆಗೂ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಲಾ ₹2 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.

ಮೃತ 6 ಮಂದಿ ಪೈಕಿ ಮೂವರು ಮಕ್ಕಳಿದ್ದಾರೆ ಎಂದು ಎಸ್‌ಪಿ ಆಶಿಶ್ ತಿವಾರಿ ಹೇಳಿದ್ದಾರೆ.

ಆಗ್ರಾ, ಮಣಿಪುರಿ, ಎಟಾ ಮತ್ತು ಫಿರೋಜಾಬಾದ್‌ನ 18 ಅಗ್ನಿಶಾಮಕ ದಳಗಳು, 12 ಪೊಲೀಸ್ ಠಾಣೆಗಳ ಸಿಬ್ಬಂದಿ ಎರಡೂವರೆ ಗಂಟೆ ಕಾಲ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು