ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯ ಶಿಕ್ಷಣ ಸಚಿವರಾಗಿ ಅತಿಶಿ, ಆರೋಗ್ಯ ಸಚಿವರಾಗಿ ಸೌರಭ್ ಭಾರದ್ವಾಜ್

Last Updated 9 ಮಾರ್ಚ್ 2023, 12:32 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಸರ್ಕಾರದ ನೂತನ ಸಚಿವರಾಗಿ ಎಎಪಿ ಶಾಸಕರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಸಿಎಂ ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಪ್ರಮಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮವೀರ್ ಸಿಂಗ್ ಬಿಧೂರ್ ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಅತಿಶಿ ಅವರಿಗೆ ಶಿಕ್ಷಣ, ಲೋಕೋಪಯೋಗಿ, ಇಂಧನ ಮತ್ತು ಪ್ರವಾಸೋದ್ಯಮ ಖಾತೆಗಳನ್ನು ನೀಡಲಾಗಿದ್ದು, ಭಾರದ್ವಾಜ್ ಅವರಿಗೆ ಆರೋಗ್ಯ, ನಗರಾಭಿವೃದ್ಧಿ, ನೀರು ಮತ್ತು ಕೈಗಾರಿಕೆ ಖಾತೆಗಳನ್ನು ವಹಿಸಲಾಗಿದೆ.

ದೆಹಲಿ ಅಬಕಾರಿ ನೀತಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ್ದ ಮನಿಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರ ಜಾಗಕ್ಕೆ ಇಬ್ಬರು ನೂತನ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

ಸಿಬಿಐನಿಂದ ಮನೀಶ್ ಸಿಸೋಡಿಯಾ ಮತ್ತು ಇ.ಡಿಯಿಂದ ಬಂಧನಕ್ಕೊಳಗಾಗಿರುವ ಸತ್ಯೇಂದ್ರ ಜೈನ್ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT