ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್ | ಮಾಜಿ ಶಾಸಕನ ಮೇಲೆ ನಕ್ಸಲ್ ದಾಳಿ ಪ್ರಕರಣ: 8 ಕಡೆಗಳಲ್ಲಿ ಎನ್‌ಐಎ ದಾಳಿ

Last Updated 15 ಮಾರ್ಚ್ 2023, 10:35 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವರ್ಷ ಜಾರ್ಖಂಡ್‌ನಲ್ಲಿ ಮಾಜಿ ಶಾಸಕ, ಬಿಜೆಪಿಯ ಗುರುಚರಣ್ ನಾಯಕ್ ಅವರ ಮೇಲೆ ನಕ್ಸಲ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಎಂಟು ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ನಡೆದ ಈ ಪ್ರಕರಣದಲ್ಲಿ ಮಾಜಿ ಶಾಸಕರ ಅಂಗರಕ್ಷಕರಾದ ಇಬ್ಬರು ಪೊಲೀಸರನ್ನು ಹತ್ಯೆ ಮಾಡಲಾಗಿತ್ತು.

ಕಳೆದ ವರ್ಷ ಜುಲೈನಲ್ಲಿ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆ ಈ ದಾಳಿ ನಡೆಸಿದ್ದು, ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿತ್ತು.

ಮಾವೋವಾದಿಗೆ ದಾಳಿ ನಡೆಸಲು ಬೆಂಬಲ ನೀಡಿದ ಸಕ್ರಿಯ ಸದಸ್ಯರಾದ ಎಂಟು ಆರೋಪಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಶೋಧ ಕಾರ್ಯಾಚರಣೆಯಲ್ಲಿ ಸಿಪಿಐ (ಮಾವೋವಾದಿ) ಪೋಸ್ಟರ್, ಹಲವು ದಾಖಲೆ, ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ವಕ್ತಾರ ತಿಳಿಸಿದ್ದಾರೆ.

ಜನವರಿ 1ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳ ವಿರುದ್ಧ ಎನ್‌ಐಎ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT