ಮುಂಬೈ: ರಾಜ್ಯದಲ್ಲಿ ನಡೆಯುತ್ತಿರುವ ಪೊಲೀಸ್ ಸಿಬ್ಬಂದಿ ಮೇಲಿನ ದಾಳಿಗಳ ಕುರಿತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಬುಧವಾರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ರೀತಿಯ ದಾಳಿಗಳು ಪೊಲೀಸರ ನೈತಿಕತೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದ್ದಾರೆ.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪವಾರ್, ಕಳೆದ ಮೂರು ತಿಂಗಳಲ್ಲಿ 30ಕ್ಕೂ ಹೆಚ್ಚು ದುಷ್ಕೃತ್ಯಗಳು ನಡೆದಿವೆ. ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಲ್ಲಿ ತ್ವರಿತವಾಗಿ ಚಾರ್ಜ್ ಶೀಟ್ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕೆಲವು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಪೊಲೀಸ್ ವಾಹನಗಳನ್ನು ಎಳೆದೊಯ್ದ ಘಟನೆಗಳು ನಡೆದಿವೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.