ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾಪದಲ್ಲಿ ಪಾಲ್ಗೊಳ್ಳಲು ಸಂಸದರಿಗೆ ರಾಜ್ಯಸಭಾ ಅಧ್ಯಕ್ಷರ ಮನವಿ

Last Updated 8 ಮಾರ್ಚ್ 2021, 7:12 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭಾ ಸದಸ್ಯರು ಕಲಾಪದಲ್ಲಿ ಪಾಲ್ಗೊಂಡು ಸಂಸದೀಯ ಪ್ರಕ್ರಿಯೆಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಮತ್ತು ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಮನವಿ ಮಾಡಿದ್ದಾರೆ.

ಬಜೆಟ್ ಅಧಿವೇಶನದ ಎರಡನೇ ಅವಧಿಯ ಮೊದಲ ದಿನದ ಕಲಾಪದ ವೇಳೆ ಸೋಮವಾರ ಮಾತನಾಡಿದ ಅವರು, ಕೆಲವು ಸದಸ್ಯರು ರಾಜಧಾನಿಯಲ್ಲೇ ಇದ್ದರೂ ಕಲಾಪಕ್ಕೆ ಹಾಜರಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

‘ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಗ್ರಂಥಾಲಯಕ್ಕೆ ಹೋಗಿ, ಶತಮಾನೋತ್ಸವ ಆಚರಿಸುತ್ತಿರುವಈ ಗ್ರಂಥಾಲಯದಲ್ಲಿ 14 ಲಕ್ಷಕ್ಕೂ ಅಧಿಕ ಪುಸ್ತಕಗಳು, ವಿವಿಧ ಭಾಷೆಗಳ ನಿಯತಕಾಲಿಕಗಳು ಇವೆ. ಆದರೆ ಗ್ರಂಥಾಲಯಕ್ಕೆ ಹೆಚ್ಚಿನ ಸದಸ್ಯರು ಹೋಗುತ್ತಿಲ್ಲ, ಫಲಪ್ರದ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿದ್ದರೆ ಸದಸ್ಯರು ತಮ್ಮ ಜ್ಞಾನ ಹೆಚ್ಚಿಸಿಕೊಳ್ಳುವ ಅಗತ್ಯ ಇದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT