ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡದಲ್ಲಿ ಹಿಮಪ್ರವಾಹ; ಹೈ ಅಲರ್ಟ್ ಘೋಷಣೆ

Last Updated 7 ಫೆಬ್ರುವರಿ 2021, 11:00 IST
ಅಕ್ಷರ ಗಾತ್ರ

ಚಮೋಲಿ (ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಹಿಮಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಹೈ-ಅಲರ್ಟ್ ಘೋಷಿಸಲಾಗಿದೆ.

ಚಮೋಲಿ ಜಿಲ್ಲೆಯ ತಪೋವನ್ ಪ್ರದೇಶದ ರೈನಿ ಗ್ರಾಮದಲ್ಲಿ ಹಿಮನದಿ ಉಕ್ಕಿ ಹರಿದಿದ್ದು, ಋಷಿ ಗಂಗಾ ವಿದ್ಯುತ್ ಯೋಜನೆಗೆ ಹಾನಿಯುಂಟಾಗಿದೆ.

ಹಿಮಪ್ರವಾಹದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಎಲ್ಲ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸೇರಿದಂತೆ ಜಿಲ್ಲಾಡಳಿತವು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಗೆಚಾಲನೆ ನೀಡಿದ್ದಾರೆ.

ಜನರಲ್ಲಿ ಗಂಗಾ ನದಿಯ ಕಡೆಗೆ ಹೋಗದಂತೆ ಎಚ್ಚರಿಸಲಾಗಿದೆ. ಅಲಕಾನಂದ ನದಿಯ ದಂಡದಲ್ಲಿ ವಾಸಿಸುವ ಜನರಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಹಿಮಪಾತ ಉಂಟಾಗಿರುವ ಹಿನ್ನೆಲೆಯಲ್ಲಿ ಕಣಿವೆ ಪ್ರದೇಶದ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ.ರೆನಿ ಗ್ರಾಮದ ಸಮೀಪ ಧೌಲಿಗಂಗಾ ಹಾಗೂ ಜೋಶಿಮಠ ಪ್ರದೇಶದಲ್ಲಿ ವ್ಯಾಪಕ ಪ್ರವಾಹದ ಸ್ಥಿತಿ ಉಂಟಾಗಿದೆ.

ಐಟಿಬಿಪಿಯ ಎರಡು ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಎನ್‌ಡಿಆರ್‌ಎಫ್‌ನ ಮೂರು ತಂಡಗಳು ಡೆಹ್ರಾಡೂನ್‌ನಿಂದ ಧಾವಿಸಲಾಗುತ್ತಿದೆ. ಹೆಚ್ಚುವರಿಮೂರು ತಂಡಗಳು ವಾಯುಪಡೆಯ ಹೆಲಿಕಾಪ್ಟರ್‌ನೊಂದಿಗೆ ಸಂಜೆಯ ವೇಳೆಗೆ ತಲುಪಲಿದೆ. ಎಸ್‌ಡಿಆರ್‌ಎಫ್ ಹಾಗೂ ಸ್ಥಳೀಯ ಆಡಳಿತ ಈಗಾಗಲೇ ಪ್ರದೇಶದಲ್ಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ:

ತಕ್ಷಣ ಪರಿಹಾರ ಕಾರ್ಯಾಚರಣೆಗೆ ನೆರವಾಗುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ವಾಯುಪಡೆ ಹಾಗೂ ಎನ್‌ಡಿಆರ್‌ಎಫ್ ಪಡೆಗಳನ್ನು ರವಾನಿಸಲು ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT