ಸೋಮವಾರ, ಜೂನ್ 14, 2021
22 °C

ರಾಜಸ್ಥಾನ ಕಾಂಗ್ರೆಸ್‌ ಉಸ್ತುವಾರಿಯಾಗಿ ಅಜಯ್‌ ಮಾಕೇನ್ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಸ್ಥಾನ ಕಾಂಗ್ರೆಸ್‌ ಉಸ್ತುವಾರಿಯಾಗಿ ದೆಹಲಿಯ ಅಜಯ್‌ ಮಾಕೇನ್‌ ಅವರನ್ನು ನೇಮಕ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. 

ಅವಿನಾಶ್‌ ಪಾಂಡೇ ಅವರನ್ನು ರಾಜಸ್ಥಾನ ಉಸ್ತುವಾರಿ ಸ್ಥಾನದಿಂದ ಕೆಳಗಿಸಲಾಗಿದ್ದು ಆ ಸ್ಥಾನಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಅಜಯ್‌ ಮಾಕೇನ್‌ ಅವರನ್ನು ನೇಮಕ ಮಾಡಲಾಗಿದೆ.

ಈ ನೇಮಕದಿಂದ ಸಚಿನ್‌ ಪೈಲಟ್‌ ಬಣಕ್ಕೆ ಆರಂಭಿಕ ಗೆಲುವು ಸಿಕ್ಕಂತಾಗಿದೆ. ಅವಿನಾಶ್‌ ಪಾಂಡೇ ಅವರು ಮುಖ್ಯಮಂತ್ರಿ  ಅಶೋಕ್ ಗೆಹ್ಲೋಟ್ ಅವರಿಗೆ ತುಂಬಾ ಆಪ್ತರಾಗಿದ್ದು ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತಿಲ್ಲ ಎಂದು ಸಚಿನ್‌ ಬಣ ಆರೋಪಿಸಿತ್ತು. ಅವಿನಾಶ್‌ ಪಾಂಡೇ ಅವರನ್ನು ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು. 

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬೇಕು ಮತ್ತು ತಮ್ಮ ಆಪ್ತರಿಗೆ ಹೆಚ್ಚಿನ ಖಾತೆಗಳನ್ನು ನೀಡಬೇಕು  ಎಂದು ಸಚಿನ್‌ ಬಣ ಪಟ್ಟುಹಿಡಿದಿದೆ. ಸದ್ಯಕ್ಕೆ ಹೈಕಮಾಂಡ್‌ ಪಾಂಡೇ ಅವರನ್ನು ತೆಗೆದುಹಾಕಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂಬ ಸೂಚನೆಯನ್ನು ನೀಡಿದೆ. ಹೈಕಮಾಂಡ್‌ನ ಈ ನಡೆಯನ್ನು ಸಚಿನ್‌ ಪೈಲಟ್‌ ಸ್ವಾಗತಿಸಿದ್ದಾರೆ.

ರಾಜಸ್ಥಾನದ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅಜಯ್ ಮಾಕೆನ್ ಅವರಿಗೆ ಅಭಿನಂದನೆಗಳು. ನಿಮ್ಮ ಈ ನೇಮಕವು ಖಂಡಿತವಾಗಿಯೂ ರಾಜಸ್ಥಾನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ ಎಂದು ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ. 

ಕಳೆದೊಂದು ತಿಂಗಳಿಂದ ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿತ್ತು. ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದು ಪೈಲಟ್‌ ಬಣ ಒಂದು ತಿಂಗಳು ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು. ನಂತರ ರಾಜಿ ಸಂಧಾನದ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ ಸಮಸ್ಯೆಯನ್ನು ಬಗೆಹರಿಸಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು