ಶುಕ್ರವಾರ, ಮೇ 14, 2021
21 °C

ಅಯೋಧ್ಯೆಯಲ್ಲಿ ಧಾರ್ಮಿಕ ಸಭೆ ಸೇರುವಿಕೆಗೆ ನಿರ್ಬಂಧ ವಿಧಿಸುವ ಸಾಧ್ಯತೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Har Ki Pauri in Ayodhya. Credit: PTI Photo

ಅಯೋಧ್ಯೆ: ಹರಿದ್ವಾರ ಕುಂಭ ಮೇಳದ ಬಳಿಕ ಅಯೋಧ್ಯೆಗೆ ಭೇಟಿ ನೀಡುವ ಸಾಧು ಸಂತರ ಹೆಚ್ಚಾಗುತ್ತಿದ್ದು, ಕೋವಿಡ್ 19 ಸೋಂಕು ಹರಡುವಿಕೆ ತಡೆಗೆ ಅಲ್ಲಿನ ಆಡಳಿತ ಕ್ರಮ ಕೈಗೊಳ್ಳಲು ಮುಂದಾಗಿದೆ.

ರಾಮ ನವಮಿ ಸಂದರ್ಭದಲ್ಲಿ ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆಯಿದೆ.

ಹೀಗಾಗಿ ಭೇಟಿ ನೀಡುವವರು 48 ಗಂಟೆಗಳ ಅವಧಿಯಲ್ಲಿ ಪಡೆದಿರುವ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಹೊಂದಿರುವ ಕ್ರಮ ಜಾರಿಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಎ ಕೆ ಝಾ ತಿಳಿಸಿದ್ದಾರೆ.

ಸಂಪ್ರದಾಯದ ಪ್ರಕಾರ, ರಾಮನವಮಿ ಆಚರಣೆಗೆ ದೇಶದ ಎಲ್ಲ ಸಾಧು ಸಂತರು ಪ್ರತಿವರ್ಷ ಅಯೋಧ್ಯೆಗೆ ಭೇಟಿ ನೀಡುವ ಪರಿಪಾಠವಿದೆ. ಹೀಗಾಗಿ ಹೆಚ್ಚಿನ ಜನರ ಸೇರುವಿಕೆಯಿಂದ ಕೋವಿಡ್ 19 ಸೋಂಕು ಹರಡುವಿಕೆ ಅಪಾಯ ಇರುವುದರಿಂದ ಅದನ್ನು ತಡೆಯಲು ಸೂಕ್ತ ಕ್ರಮಕ್ಕೆ ಆಡಳಿತ ಯೋಚಿಸುತ್ತಿದೆ.

ಏಪ್ರಿಲ್ 21ರಂದು ಅಯೋಧ್ಯೆಗೆ ರಾಮನವಮಿ ಆಚರಿಸಲು ಧರ್ಮಗುರುಗಳು ಮತ್ತು ಭಕ್ತರು ತೆರಳಲಿದ್ದಾರೆ. ಹರಿದ್ವಾರ ಕುಂಭಮೇಳದಲ್ಲಿ ಭಾಗವಹಿಸಿದ್ದವರ ಪೈಕಿ 1,700ಕ್ಕೂ ಅಧಿಕ ಭಕ್ತರು ಮತ್ತು ಸಂತರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು