ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ ಪಥಸಂಚಲನ: ಗಮನಸೆಳೆದ ಅಯೋಧ್ಯೆ ರಾಮಮಂದಿರ ಸ್ತಬ್ಧಚಿತ್ರ

Last Updated 26 ಜನವರಿ 2021, 8:19 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ಮಾದರಿ ಒಳಗೊಂಡ, ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರ ಇಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಗಮನಸೆಳೆಯಿತು.

ಸ್ತಬ್ಧಚಿತ್ರದ ಬಹುಪಾಲು ಸ್ಥಳವನ್ನು ರಾಮಮಂದಿರದ ಮಾದರಿ ಆವರಿಸಿದ್ದರೆ, ಮುಂಭಾಗ ಮಹರ್ಷಿ ವಾಲ್ಮೀಕಿ ಕುಳಿತ ಭಂಗಿಯಲ್ಲಿರುವ ಎತ್ತರದ ಮೂರ್ತಿ ಇತ್ತು. ‘ಇದು, ಪ್ರಾಚೀನ ನಗರ ಅಯೋಧ್ಯೆಯ ಪರಂಪರೆ ಬಿಂಬಿಸಲಿದೆ’ ಎಂದು ಉತ್ತರ ಪ್ರದೇಶದ ಅಧಿಕಾರಿಯೊಬ್ಬರು ತಿಳಿಸಿದರು. ಸಂತರ ವೇಷದಲ್ಲಿದ್ದ ಹಲವರು, ಕರಕುಶಲ ಕಲಾವಿದರು ಇದ್ದರು.

ಸ್ತಬ್ಧಚಿತ್ರದ ಒಂದು ಬದಿಯಲ್ಲಿ, ಗಿನ್ನಿಸ್ ದಾಖಲೆಗೆ ಸೇರಿರುವ ಅಯೋಧ್ಯೆಯ ದೀಪೋತ್ಸವ ಆಚರಣೆಯ ವಿವರಗಳಿದ್ದವು. ಉಳಿದಂತೆ, ಶ್ರೀರಾಮ, ಶಬರಿ, ಅಹಿಲ್ಯಾ, ಹನುಮಾನರ ಉಬ್ಬುಕಲಾಕೃತಿಗಳು ಇದ್ದವು. ಉತ್ತರ ಪ್ರದೇಶ, ಕರ್ನಾಟಕ ಸೇರಿ ವಿವಿಧ ರಾಜ್ಯಗಳ 17 ಸ್ತಬ್ಧಚಿತ್ರಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT