ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ, ಯೋಗಿ ವಿರುದ್ಧ ದ್ವೇಷ ಭಾಷಣ: ಎಸ್​ಪಿ ನಾಯಕ ಆಜಂ ಖಾನ್ ದೋಷಿ

Last Updated 27 ಅಕ್ಟೋಬರ್ 2022, 10:51 IST
ಅಕ್ಷರ ಗಾತ್ರ

ಲಖನೌ: ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿದೆ.

ಆಜಂ ಖಾನ್ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯವು ಇನ್ನಷ್ಟೇ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಬೇಕಿದೆ.

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಮತ್ತು ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಅಪರಾಧ ಸಾಬೀತಾದ ಹಿ‌ನ್ನೆಲೆಯಲ್ಲಿ ಆಜಂ ಖಾನ್ ಅವರು ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಕಾಲ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ. ಇದರೊಂದಿಗೆ ಖಾನ್ ರಾಜ್ಯ ವಿಧಾನಸಭೆಯ ಸದಸ್ಯತ್ವವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ವರದಿಯಾಗಿದೆ.

ವಂಚನೆ ಪ್ರಕರಣದಲ್ಲಿ ಖಾನ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಹಿನ್ನೆಲೆಯಲ್ಲಿ 2022ರ ಮೇ 20ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಅವರು ಎರಡು ವರ್ಷ ಜೈಲಿನಲ್ಲಿದ್ದರು.

ಭೂ ಕಬಳಿಕೆಯೂ ಸೇರಿದಂತೆ ಖಾನ್‌ ವಿರುದ್ಧ ಉತ್ತರ ಪ್ರದೇಶದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 90ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT