ಶುಕ್ರವಾರ, ಮೇ 14, 2021
32 °C

ಜಿತಿನ್‌ ಪ್ರಸಾದ್‌ಗೆ ಕೋವಿಡ್‌; ಚುನಾವಣೆ ಉಸ್ತುವಾರಿ ಹರಿಪ್ರಸಾದ್‌ ಹೆಗಲಿಗೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ಎಐಸಿಸಿ ಉಸ್ತುವಾರಿಯಾಗಿ ಬಿ.ಕೆ ಹರಿಪ್ರಸಾದ್‌ ಅವರು ಕಾರ್ಯನಿರ್ವಹಿಸಲಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಐಸಿಸಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ಕಾಂಗ್ರೆಸ್‌ ಹಿರಿಯ ನಾಯಕ ಜಿತಿನ್‌ ಪ್ರಸಾದ್‌ ಅವರನ್ನು ನೇಮಿಸಲಾಗಿತ್ತು. ಆದರೆ ಅವರಲ್ಲಿ ಕೋವಿಡ್‌ ದೃಢಪಟ್ಟಿದ್ದರಿಂದ ಹರಿಪ್ರಸಾದ್‌ ಅವರಿಗೆ ಈ ಜವಾಬ್ದಾರಿಯನ್ನು ಕೊಡಲಾಗಿದೆ.

‘ಪಶ್ವಿಮ ಬಂಗಾಳದಲ್ಲಿ ಕಾಂಗ್ರೆಸ್‌ ಪರ ಭರ್ಜರಿ ಚುನಾವಣಾ ಪ್ರಚಾರ ಮಾಡಿದ್ದ ಜಿತಿನ್‌ ಪ್ರಸಾದ್‌ ಅವರಿಗೆ ಕೋವಿಡ್‌ ತಗುಲಿದೆ. ಅವರಿಗೆ ಪ್ರತ್ಯೇಕ ವಾಸದಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ಎಐಸಿಸಿ ಚುನಾವಣಾ ಉಸ್ತುವಾರಿಯಾಗಿ ನಾನು ಕಾರ್ಯ ನಿರ್ವಹಿಸಲಿದ್ದೇನೆ’ ಎಂದು ಹರಿಪ್ರಸಾದ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು