ಬುಧವಾರ, ಅಕ್ಟೋಬರ್ 28, 2020
24 °C

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ವಿವಿಧ ನಾಯಕರ ಪ್ರತಿಕ್ರಿಯೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬಾಬರಿ ಮಸೀದಿ ಧ್ವಂಸ ಪ್ರಕರಣ ಕುರಿತು ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ತೀರ್ಪು ರಾಮ ಜನ್ಮಭೂಮಿ ಚಳವಳಿಯ ಬಗ್ಗೆ ನನ್ನ ವೈಯಕ್ತಿಕ ಮತ್ತು ಬಿಜೆಪಿಯ ನಂಬಿಕೆ ಮತ್ತು ಬದ್ಧತೆಯನ್ನು ಸಮರ್ಥಿಸುತ್ತದೆ

-ಲಾಲ್‌ಕೃಷ್ಣ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ, ತೀರ್ಪು ಪ್ರಕಟಗೊಂಡ ನಂತರ ಮೊದಲ ಪ್ರತಿಕ್ರಿಯೆ

ಬಾಬ್ರಿ ಮಸೀದಿ ಪ್ರಕರಣದಲ್ಲಿ ಮತಬ್ಯಾಂಕ್ ರಾಜಕಾರಣಕ್ಕಾಗಿ  ಸಂತರು, ಬಿಜೆಪಿ ನಾಯಕರು, ವಿಶ್ವ ಹಿಂದೂಪರಿಷತ್ ಕಾರ್ಯಕರ್ತರ ವಿರುದ್ಧ ಅಂದಿನ ಕಾಂಗ್ರೆಸ್‌ ಸರ್ಕಾರ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು ಎಂದು ಈ ತೀರ್ಪು ಸಾಬೀತುಪಡಿಸಿದೆ.

ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದ ಮುಖ್ಯಮಂತ್ರಿ.

***

ಇದು ನ್ಯಾಯಾಲಯದ ಐತಿಹಾಸಿಕ ನಿರ್ಧಾರ. ಈ ತೀರ್ಪು ಅಯೋಧ್ಯೆಯಲ್ಲಿ ಡಿಸೆಂಬರ್ 6 ರ ಘಟನೆಗೆ ಯಾವುದೇ ಪಿತೂರಿ ನಡೆದಿಲ್ಲ ಎಂದು ಸಾಬೀತುಪಡಿಸಿದೆ. ಅಂದಿನ ನಮ್ಮ ಕಾರ್ಯಕ್ರಮ ಮತ್ತು ರ‍್ಯಾಲಿಗಳು ಯಾವುದೇ ಪಿತೂರಿಯ ಭಾಗವಾಗಿರಲಿಲ್ಲ.

ಮುರಳಿ ಮನೋಹರ್ ಜೋಶಿ, ಬಿಜೆಪಿ ಮುಖಂಡ 

****

ಲಖನೌದ ಸಿಬಿಐ ವಿಶೇಷ ನ್ಯಾಯಾಲಯ ಪ್ರಕರಣದ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಎಷ್ಟೇ ವಿಳಂಬವಾದರೂ ನ್ಯಾಯ ಗೆಲ್ಲುತ್ತದೆ.

ರಾಜನಾಥ್ ಸಿಂಗ್, ರಕ್ಷಣಾ ಸಚಿವ 

ಇದು ಸಂಪೂರ್ಣ ನ್ಯಾಯದ ಅಣಕು. ಬಾಬ್ರಿಮಸೀದಿ ಧ್ವಂಸಗೊಳಿಸಿದ ಆರೋಪ ಹೊತ್ತಿರುವ ಎಲ್ಲರೂ ಖುಲಾಸೆಗೊಂಡಿದ್ದಾರೆ. ಇದು ಸ್ವಯಂ ಪ್ರಚೋದಿತವೇ ?

‘ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಕಾನೂನಿನ ಉಲ್ಲಂಘನೆ ಎಂದು ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದರು. ಇಂದು ಈ ತೀರ್ಪು. ಶೇಮ್‌...

ಸೀತಾರಾಂ ಯಚೂರಿ, ಸಿಪಿಐ ನಾಯಕ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು