ಶುಕ್ರವಾರ, ಮೇ 27, 2022
31 °C

ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಟಿಎಂಸಿ ನಾಯಕ ಬಾಬುಲ್ ಸುಪ್ರಿಯೊ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ತಿಂಗಳ ಹಿಂದೆಯಷ್ಟೇ ಬಿಜೆಪಿ ತೊರೆದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಕ್ಷ ಸೇರಿದ್ದ ಕೇಂದ್ರದ ಮಾಜಿ ಸಚಿವ ಬಾಬುಲ್ ಸುಪ್ರಿಯೊ ಮಂಗಳವಾರ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇಷ್ಟು ದಿನ ನನ್ನ ಮೇಲೆ ವಿಶ್ವಾಸವಿಟ್ಟ ಪಕ್ಷ ಮತ್ತು ಬಿಜೆಪಿ ನಾಯಕರಾದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ‘ ಎಂದರು.

‘ಬಿಜೆಪಿಯಿಂದ ನಾನು ರಾಜಕೀಯ ಜೀವನ ಆರಂಭಿಸಿದೆ. ಅಂಥ ಪಕ್ಷದೊಂದಿಗೆ ಸಂಬಂಧ ಕಳೆದುಕೊಳ್ಳುವುದು ಸುಲಭದ ಮಾತಲ್ಲ. ಈಗ ಬಿಜೆಪಿಯೊಂದಿಗೆ ಅಧಿಕೃತವಾಗಿ ಸಂಬಂಧ ಕಡಿದುಕೊಳ್ಳುತ್ತಿರುವುದಕ್ಕೆ ನನ್ನ ಮನಸ್ಸು ಭಾರವಾಗಿದೆ‘ ಎಂದು ಬಾಬುಲ್ ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು