ಬುಧವಾರ, ಜನವರಿ 27, 2021
22 °C

ಬದಾಯುಂ ಸಾಮೂಹಿಕ ಅತ್ಯಾಚಾರ: ಆರೋಪಿಗಳು ಪೊಲೀಸರ ಕಸ್ಟಡಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬದಾಯುಂ: ಉತ್ತರ ಪ್ರದೇಶದ ಬದಾಯುಂನಲ್ಲಿ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಹತ್ಯೆಗೈದಿರುವ ಆರೋಪ ಎದುರಿಸುತ್ತಿರುವ ಪುರೋಹಿತ ಮತ್ತು ಆತನ ಸಹಚರರನ್ನು ಸ್ಥಳೀಯ ನ್ಯಾಯಾಲಯವು ಒಂದು ದಿನದ ಮಟ್ಟಿಗೆ ಪೊಲೀಸ್‌ ಕಸ್ಟಡಿಗೆ ನೀಡಿದೆ.

‘ಈ ಪ್ರಕರಣದ ಮೂರು ಆರೋಪಿಗಳು ಜೈಲಿನಲ್ಲಿ ಇದ್ದಾರೆ. ಆದರೆ ಪ್ರಕರಣ ಸಂಬಂಧಿಸಿದ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ತೆಗೆದುಕೊಂಡಿದ್ದೇವೆ’ ಎಂದು ಬಿಲ್ಸಿಯ ಸರ್ಕಲ್‌ ಅಧಿಕಾರಿ ಅನಿರುದ್ಧ್‌ ಸಿಂಗ್‌ ಅವರು ಬುಧವಾರ ತಿಳಿಸಿದರು.

‘ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡುವಂತೆ ನ್ಯಾಯಾಲಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಂಗಳವಾರ ಮನವಿ ಮಾಡಲಾಗಿತ್ತು. ಇದಕ್ಕಾಗಿ ಅನುಮತಿಯೂ ದೊರಕಿದೆ’ ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಬದಾಯುಂ ಜಿಲ್ಲೆಯಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು