ನವದೆಹಲಿ: ಜಾಮೀನು ಅರ್ಜಿ ಸಲ್ಲಿಸುವ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಶನಿವಾರ ಸಾಕೇತ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನಾನು ವಕಾಲತುನಾಮೆಗೆ ಮಾತ್ರ ಸಹಿ ಹಾಕಿದ್ದೆ ಎಂದು ಆತ ತಿಳಿಸಿದ್ದಾನೆ.
ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಅಫ್ತಾಬ್‌ನನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
‘ಜಾಮೀನು ಅರ್ಜಿಯನ್ನು ಅಚಾತುರ್ಯದಿಂದ ಸಲ್ಲಿಸಲಾಗಿದೆ‘ ಎಂದು ಪೂನಾವಾಲಾ ಇಮೇಲ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವೃಂದಾ ಕುಮಾರಿ ಅವರು ಹೇಳಿದರು.
ಜಾಮೀನು ಅರ್ಜಿ ವಿಚಾರಣೆ ಮುಂದುವರಿಸಬೇಕೇ ಎಂದು ನ್ಯಾಯಾಲಯವು ಅಫ್ತಾಬ್‌ನನ್ನು ಪ್ರಶ್ನೆ ಮಾಡಿತು. ‘ವಕೀಲರೊಂದಿಗೆ ಮಾತನಾಡಿ ನಂತರ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಳ್ಳುತ್ತೇನೆ’ ಎಂದು ಅಫ್ತಾಬ್ ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಅದರಂತೆ ಅರ್ಜಿಯ ವಿಚಾರಣೆಯನ್ನು ಡಿ. 22ಕ್ಕೆ ಮುಂದೂಡಲಾಯಿತು.
ಜಾಮೀನು ಕೋರಿ ಅಫ್ತಾಬ್ ಶುಕ್ರವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.
ನವೆಂಬರ್ 12 ರಂದು ಅತನನ್ನು ಬಂಧಿಸಲಾಗಿತ್ತು. ಡಿಸೆಂಬರ್ 9 ರಂದು ಪೂನಾವಾಲಾ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಲಾಗಿತ್ತು. ಪ್ರಸ್ತುತ ಆತ ತಿಹಾರ್ ಜೈಲಿನಲ್ಲಿ ಇದ್ದಾನೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.