ಸಿಎಂ ಅಮರಿಂದರ್ ಭೇಟಿಯಾದ ಪಂಜಾಬ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಬಾಜ್ವಾ

ಚಂಡೀಗಡ: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಪಕ್ಷದ ಪಂಜಾಬ್ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಭೇಟಿಯಾಗಿರುವ ಪಂಜಾಬ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಪ್ರತಾಪ್ ಸಿಂಗ್ ಬಾಜ್ವಾ ಮಾತುಕತೆ ನಡೆಸಿದ್ದಾರೆ.
ಸಿಎಂ ಟೀಕಾಕಾರ ಬಾಜ್ವಾ ಅವರನ್ನು ತಮ್ಮ ನಿವಾಸಕ್ಕೆ ಬರಮಾಡಿಕೊಂಡಿರುವ ಅಮರಿಂದರ್ ಚರ್ಚೆ ನಡೆಸಿದ್ದಾರೆ. ಇದು ಹೆಚ್ಚಿನ ಕುತೂಹಲ ಮೂಡಿಸಿದೆ.
ಇದನ್ನೂ ಓದಿ: ‘ಸೋನಿಯಾ ಗಾಂಧಿ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧ’: ಅಮರಿಂದರ್ ಸಿಂಗ್
ಈ ಸಂದರ್ಭದಲ್ಲಿ ರಾಜ್ಯಸಭಾ ಸಂಸದ ಬಾಜ್ವಾ ಹೊರತಾಗಿ ಪಂಜಾಬ್ ವಿಧಾನಸಭಾ ಸ್ಪೀಕರ್ ರಾಣಾ ಕೆ.ಪಿ. ಸಿಂಗ್ ಮತ್ತು ಕ್ರೀಡಾ ಸಚಿವ ರಾಣಾ ಗುರ್ಮಿತ್ ಸಿಂಗ್ ಸೋಧಿ ಉಪಸ್ಥಿತರಿದ್ದರು.
ಶನಿವಾರದಂದೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಜಾಖಡ್, ಸಿಎಂ ನಿಷ್ಠಾವಂತರು ಸೇರಿದಂತೆ ಹಲವಾರು ಶಾಸಕರೊಂದಿಗೆ ಸಿಧು ಮಾತುಕತೆ ನಡೆಸಿದ್ದರು.
Punjab Speaker @RanakpINC, Rajya Sabha MP and former @INCPunjab president @Partap_Sbajwa and cabinet minister @iranasodhi call on Chief Minister @capt_amarinder at his residence. pic.twitter.com/N7GvU4E06o
— Raveen Thukral (@RT_MediaAdvPBCM) July 17, 2021
ಈ ಕುರಿತು ಸಿಎಂ ಮಾಧ್ಯಮ ಸಲಹೆಗಾರ ಟ್ವೀಟ್ ಮಾಡಿದ್ದು, ಚಿತ್ರವನ್ನು ಹಂಚಿದ್ದಾರೆ.
ಇದನ್ನು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ರಿ ಟ್ವೀಟ್ ಮಾಡಿದ್ದು, ಬಾಜ್ವಾ ಹಾಗೂ ಅಮರಿಂದರ್ ಜೊತೆಯಾಗಿ ನೋಡಿರುವುದು ಖುಷಿ ತಂದಿದೆ. ಸಿಎಂ ಉತ್ತಮ ತಂಡವನ್ನು ಕಟ್ಟಬಲ್ಲರು ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು ಅಮರಿಂದರ್ ಸಿಂಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರನ್ನು ಭೇಟಿಯಾಗಿದ್ದರು.
'ಗುರು ಗ್ರಂಥ ಸಾಹೀಬ' ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವುದು ಮತ್ತು 2015ರಲ್ಲಿ ನಡೆದ ಪೊಲೀಸ್ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಯನ್ನು ಈಡೇರಿಸದ್ದಕ್ಕೆ ಅಮರಿಂದರ್ ಅವರನ್ನು ಬಾಜ್ವಾ ಟೀಕಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.