ಗುರುವಾರ , ಅಕ್ಟೋಬರ್ 29, 2020
27 °C
ಸಿಂಗ್‌ ಕಚೇರಿಯಲ್ಲಿದ್ದಾಗಲೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಭಯೋತ್ಪಾದನೆ ವಿರುದ್ಧದ ಹೋರಾಟಗಾರ ಬಲ್ವಿಂದರ್ ಸಿಂಗ್‌ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮೃತಸರ: ‘ಶೌರ್ಯ ಚಕ್ರ’ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್‌ ಸಿಂಗ್‌ (62) ಅವರನ್ನು ಅಪರಿಚಿತ ದುಷ್ಕರ್ಮಿಗಳು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ತರನ್‌ ತಾರನ್‌ ಭಿಖಿವಿಂಡ್‌ ಗ್ರಾಮದಲ್ಲಿ ತಮ್ಮ ಮನೆಗೆ ಹೊಂದಿಕೊಂಡಿರುವ ಕಚೇರಿಯಲ್ಲಿದ್ದ ಸಿಂಗ್‌ ಅವರ ಮೇಲೆ ಮೋಟಾರ್‌ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಬಲ್ವಿಂದರ್‌ ಸಿಂಗ್ ಅವರು ಪಂಜಾಬ್‌ ರಾಜ್ಯದಲ್ಲಿ ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದರು. ಈ ಹಿಂದೆ ಅನೇಕಬಾರಿ ಅವರ ಮೇಲೆ ಭಯೋತ್ಪಾದಕರು ಹಲ್ಲೆ ನಡೆಸಿದ್ದರು. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಭದ್ರತೆ ಒದಗಿಸಿತ್ತು.

ತರನ್‌ ತಾರನ್‌ ಪೊಲೀಸರ ಶಿಫಾರಸಿನ ಮೇರೆಗೆ ರಾಜ್ಯ ಸರ್ಕಾರ ಸಿಂಗ್‌ ಅವರಿಗೆ ನೀಡಿದ್ದ ಭದ್ರತೆಯನ್ನು ವರ್ಷದ ಹಿಂದೆ ಹಿಂತೆಗೆದುಕೊಂಡಿತ್ತು ಎಂದು ಅವರ ಸಹೋದರ ರಂಚಿತ್ ಹೇಳಿದ್ದಾರೆ. ‘ನಮ್ಮ ಇಡೀ ಕುಟುಂಬ ಭಯೋತ್ಪಾದಕರ ಹಿಟ್‌ ಲಿಸ್ಟ್‌ನಲ್ಲಿದೆ’ ಎಂದು ಅವರು ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದ್ದ ಬಲ್ವಿಂದರ್ ಸಿಂಗ್ ಅವರ ಧೈರ್ಯವನ್ನು ಮೆಚ್ಚಿ ಕೇಂದ್ರ ರಕ್ಷಣಾ ಸಚಿವಾಲಯ 1993ರಲ್ಲಿ ಸಿಂಗ್ ಅವರಿಗೆ ‘ಶೌರ್ಯ ಚಕ್ರ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಸಿಂಗ್ ಅವರ ಧೈರ್ಯ ಮತ್ತು ಸಾಹಸದ ಚಟುವಟಿಕೆಗಳ ಕುರಿತು ಅನೇಕ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು