ಭಾನುವಾರ, ಮೇ 29, 2022
21 °C

#BanMES: ಎಂಇಎಸ್ ಪುಂಡಾಟಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು, ಕನ್ನಡಿಗರ ಹಾಗೂ ಕರ್ನಾಟಕದವರಿಗೆ ಸಂಬಂಧಿಸಿದ ವಾಹನಗಳ ಮೇಲೆ ದಾಳಿ ಮಾಡಿ ಪುಂಡಾಟ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ಇದೇ ವಿಷಯವಾಗಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಎಂಇಎಸ್‌ ನಡೆಯನ್ನು ವ್ಯಾಪಕವಾಗಿ ಖಂಡಿಸಿದ್ದಾರೆ. ಅದರಲ್ಲೂ #BanMES ಹ್ಯಾಶ್ ಟ್ಯಾಗ್ ಟ್ವಿಟರ್‌ನಲ್ಲಿ ನಂ.1 ಟ್ರೆಂಡಿಂಗ್ ಆಗಿತ್ತು.

ಇದೇ ವಿಷಯವಾಗಿ ಸುಮಾರು 43 ಸಾವಿರ ಟ್ವೀಟ್‌ಗಳು ರಾತ್ರಿಯ ವೇಳೆಗೆ ಹೊರಬಿದ್ದಿದ್ದವು.

ಅನೇಕರು ಕನ್ನಡಿಗರಿಗೆ ಹಾಗೂ ಕರ್ನಾಟಕಕ್ಕೆ ಅವಮಾನ ಮಾಡುವ ನಡೆ ಅನುಸರಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿರುವುದಲ್ಲದೇ ಅಮಾಯಕರ ಮೇಲೆ ಭಾಷಾ ವಿಷಯ ಮುಂದಿಟ್ಟುಕೊಂಡು ದಾಳಿ ಮಾಡುವುದು ಸರಿ ಅಲ್ಲ ಎಂದು ಟೀಕಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು