ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಬಾಂಗ್ಲಾದೇಶದಲ್ಲಿ ಏಳು ದಿನ ಲಾಕ್‌ಡೌನ್

Last Updated 5 ಏಪ್ರಿಲ್ 2021, 10:00 IST
ಅಕ್ಷರ ಗಾತ್ರ

ಢಾಕಾ: ಬಾಂಗ್ಲಾದೇಶ ಸರ್ಕಾರವು ಕೋವಿಡ್‌ ಪ್ರಸರಣವನ್ನು ನಿಯಂತ್ರಿಸಲು ಸೋಮವಾರದಿಂದ ಏಳು ದಿನಗಳವರೆಗೆ ದೇಶವ್ಯಾಪ್ತಿ ಲಾಕ್‌ಡೌನ್‌ ಅನ್ನು ಜಾರಿಗೊಳಿಸಿದೆ.

ಈ ಸಂದರ್ಭದಲ್ಲಿ ಸಾರ್ವಜನಿಕ ಸಾರಿಗೆ ಮತ್ತು ಮಾರುಕಟ್ಟೆಗಳನ್ನು ಮುಚ್ಚಲು ಬಾಂಗ್ಲಾದೇಶ ಸರ್ಕಾರ ನಿರ್ಧರಿಸಿದೆ. ಈ ನಡೆಯನ್ನು ವಿರೋಧಿಸಿ ಸಣ್ಣ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

‘ ಸೋಮವಾರ ಮುಂಜಾನೆ 6 ಗಂಟೆಯಿಂದ ಏಪ್ರಿಲ್‌ 11ರ ಮಧ್ಯಾಹ್ನ 12 ಗಂಟೆಯವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ’ ಎಂದು ಡಾಕಾ ಟ್ರಿಬ್ಯೂನ್ ವರದಿ ಮಾಡಿದೆ.

ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ತನಕ ಮನೆಯಿಂದ ಹೊರ ಬರದಂತೆ ಜನರಿಗೆ ಸೂಚನೆ ನೀಡಲಾಗಿದೆ. ಈ ಲಾಕ್‌ಡೌನ್‌ ಅವಧಿಯಲ್ಲಿ ಎಲ್ಲಾ ಸಾರಿಗೆ ಸೇವೆಗಳನ್ನು( ರಸ್ತೆ, ಜಲ, ರೈಲ್ವೆ ಮತ್ತು ದೇಶಿಯ ವಿಮಾನಗಳನ್ನು) ರದ್ದುಗೊಳಿಸಲಾಗಿದೆ. ಅಲ್ಲದೆ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

ಆದರೆ ಸರ್ಕಾರಿ / ಸರ್ಕಾರೇತರ / ಸ್ವಾಯತ್ತ ಕಚೇರಿಗಳು, ನ್ಯಾಯಾಲಯ ಮತ್ತು ಖಾಸಗಿ ಕಚೇರಿಗಳು ನಿಯಮಿತ ಪ್ರಯಾಣಕ್ಕಾಗಿ ತಮ್ಮದೇ ವಾಹನಗಳನ್ನು ಬಳಸಿಕೊಳ್ಳಬಹುದು ಎಂದು ಸರ್ಕಾರ ಹೇಳಿದೆ.

‘ಬಾಂಗ್ಲಾದೇಶದಲ್ಲಿ ಕೋವಿಡ್‌ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಸಮಸ್ಯೆಯನ್ನು ನಿಭಾಯಿಸಲು ಸರ್ಕಾರವು ಕೋವಿಡ್‌ ಆಸ್ಪತ್ರೆಗಳ ಸಂಖ್ಯೆ ಮತ್ತು ಐಸಿಯುಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ನಿರ್ಧರಿಸಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಬಾಂಗ್ಲಾದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,087 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 637,364ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿನಿಂದಾಗಿ ಹೊಸದಾಗಿ 53 ಮಂದಿ ಸೇರಿದಂತೆ ಒಟ್ಟು 9,266 ಜನರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT