ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ. 5 ರಂದು ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಭಾರತಕ್ಕೆ; ಮೋದಿ ಜೊತೆ ಮಾತುಕತೆ

Last Updated 2 ಸೆಪ್ಟೆಂಬರ್ 2022, 3:24 IST
ಅಕ್ಷರ ಗಾತ್ರ

ನವದೆಹಲಿ: ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ಸೆಪ್ಟೆಂಬರ್‌ 5 ರಿಂದ 8ರ ವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಹಸೀನಾ ಅವರ ಭೇಟಿ ಸಂದರ್ಭದಲ್ಲಿ ಕುಶಿಯಾರಾ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದ ಒಪ್ಪಂದಕ್ಕೆ ಎರಡೂ ದೇಶಗಳು ಸಹಿಹಾಕುವ ನಿರೀಕ್ಷೆಯಿದೆ.

ಇದೇ ವೇಳೆ ಹಸೀನಾ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿರುವ ಸಂತ ಮೋಯಿನುದ್ದೀನ್‌ ಚಿಸ್ತಿ ಅವರ ದರ್ಗಾಗೆ ಭೇಟಿ ನೀಡುವ ಸಾಧ್ಯತೆ ಇದೆ.

ಬಾಂಗ್ಲಾ ಪ್ರಧಾನಿ ಭೇಟಿ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಆರಿಂದಮ್‌ ಬಾಗ್ಚಿ ಮಾಹಿತಿ ನೀಡಿದ್ದಾರೆ. ಹಸೀನಾ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಹಾಗೂ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನೂ ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

'ಇತ್ತೀಚಿನ ವರ್ಷಗಳಲ್ಲಿ ಉಭಯ ದೇಶಗಳು ಅತ್ಯುನ್ನತ ಮಟ್ಟದ ಮಾತುಕತೆಗಳನ್ನು ನಡೆಸಿವೆ.ಬಾಂಗ್ಲಾ ಪ್ರಧಾನಿಯವರ ಮುಂಬರುವ ಭೇಟಿಯು ಬಲವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಬಾಂಧವ್ಯ, ಪರಸ್ಪರ ನಂಬಿಕೆ ಹಾಗೂ ವಿವೇಚನೆ ಆಧಾರದಲ್ಲಿಎರಡೂ ದೇಶಗಳ ನಡುವಿನ ಬಹುಮುಖಿ ಸಂಬಂಧವನ್ನು ಗಟ್ಟಿಗೊಳಿಸಲಿದೆ' ಎಂದು ಬಾಗ್ಚಿ ಹೇಳಿದ್ದಾರೆ.

ಹಸೀನಾ ಅವರು 2019ರ ಅಕ್ಟೋಬರ್‌ನಲ್ಲಿ ಕೊನೆಯ ಸಲ ಭಾರತಕ್ಕೆ ಬಂದಿದ್ದರು.

ಬಾಂಗ್ಲಾದೇಶದ ಪಿತಾಮಹ ಶೇಕ್ ಮುಜಿಬುರ್ ರಹಮಾನ್ ಅವರಜನ್ಮ ಶತಮಾನೋತ್ಸವ ಹಾಗೂ ಆ ದೇಶದ50ನೇ ಸ್ವಾತಂತ್ರ್ಯ ದಿನ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ಕಳೆದ ವರ್ಷ ಮಾರ್ಚ್‌ನಲ್ಲಿ ನೆರೆಯ ರಾಷ್ಟ್ರಕ್ಕೆಪ್ರಯಾಣ ಬೆಳೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT