ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನುಸುಳುಕೋರರ ಮೇಲೆ ಬಿಎಸ್‌ಎಫ್‌ ಸಿಬ್ಬಂದಿ ಹಾರಿಸಿದ ಗುಂಡಿಗೆ ಬಾಂಗ್ಲಾ ಮಹಿಳೆ ಸಾವು

Last Updated 22 ಡಿಸೆಂಬರ್ 2020, 10:51 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿರುವ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಒಳನುಸುಳುಕೋರರನ್ನು ತಡೆಯಲು ಬಿಎಸ್ಎಫ್‌ ಸಿಬ್ಬಂದಿ ಗುಂಡು ಹಾರಿಸಿದ ವೇಳೆ ಬಾಂಗ್ಲಾದೇಶದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಹೇಳಿದೆ.

ಒಳನುಸುಳುಕೋರರೊಂದಿಗಿನ ನಡೆದ ಘರ್ಷಣೆಯಲ್ಲಿ ಬಿಎಸ್‌ಎಫ್‌ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಪಡೆಯು ತಿಳಿಸಿದೆ.

ಬಾಂಗ್ಲಾದೇಶದಿಂದ ಮೂರ್ನಾಲ್ಕು ಮಂದಿ ಸೋಮವಾರ ಪಖುರಿಯಾ ಗಡಿ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು ಎಂದು ಸೇನೆ ಹೇಳಿದೆ.

‘ 8–10 ಮಂದಿ ಗಡಿಯಲ್ಲಿ ಹಾಕಲಾಗಿರುವ ಬೇಲಿಗಳಿಂದ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸಿದರು. ಈ ವೇಳೆ ರಕ್ಷಣಾ ಸಿಬ್ಬಂದಿಯು ಅವರನ್ನು ಹಿಂದೆ ಸರಿಯುವಂತೆ ಕೋರಿದ್ದಾರೆ. ಆದರೆ ಅವರ ಮಾತು ಕೇಳದ ನುಸುಳುಕೋರರು ಚೂಪಾದ ಅಸ್ತ್ರ ಮತ್ತು ಕಲ್ಲುಗಳಿಂದ ದಾಳಿ ನಡೆಸಿದ್ದಾರೆ’ ಎಂದು ಬಿಎಸ್‌ಎಫ್‌ ಮಾಹಿತಿ ನೀಡಿದೆ.

‘ಈ ವೇಳೆ ಆತ್ಮ ರಕ್ಷಣೆಗಾಗಿ ಬಿಎಸ್‌ಎಫ್‌ ಯೋಧರು ಗುಂಡು ಹಾರಿಸಿದ್ದಾರೆ. ಮಹಿಳೆಯೊಬ್ಬರಿಗೆ ಗುಂಡು ತಗುಲಿದೆ. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಹಿಳೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ’ ಎಂದು ಬಿಎಸ್‌ಎಫ್‌ ತಿಳಿಸಿದೆ.

ಈ ಬಗ್ಗೆ ಬಿಎಸ್‌ಎಫ್‌ ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT