ಮಂಗಳವಾರ, ಅಕ್ಟೋಬರ್ 26, 2021
28 °C

ಮನಸುಖ್ ಮಾಂಡವಿಯಾ‌ ಭೇಟಿಯಾದ ಬೊಮ್ಮಾಯಿ: ಡಿಎಪಿ, ಪೊಟ್ಯಾಷ್ ಗೊಬ್ಬರಕ್ಕೆ‌ ಬೇಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯದಲ್ಲಿನ ರೈತರಿಗೆ ಅನುಕೂಲ ಕಲ್ಪಿಸಲು  ಹಿಂಗಾರು ಹಂಗಾಮಿಗೆ 32,000 ಟನ್ ಡಿಎಪಿ ಗೊಬ್ಬರ ಪೂರೈಸುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶುಕ್ರವಾರ ಮನವಿ ಸಲ್ಲಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ‌ ಸಚಿವ ಮನಸುಖ್ ಮಾಂಡವಿಯಾ‌ ಅವರನ್ನು ಭೇಟಿ ಮಾಡಿ ಈ ಕುರಿತ‌ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಈ‌ ವಿಷಯ ತಿಳಿಸಿದರು.
 
ಡಿಎಪಿ ಮಾತ್ರವಲ್ಲದೆ, ರಾಜ್ಯಕ್ಕೆ 10,000 ಟನ್ ಪೊಟ್ಯಾಷ್ ಗೊಬ್ಬರದ ಬೇಡಿಕೆ ಇದೆ. ಅದರ ಪೂರೈಕೆಗೂ ಕ್ರಮ‌ ಕೈಗೊಳ್ಳುವಂತೆ ಕೋರಲಾಗಿದೆ.  ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ಅವರು ತಿಳಿಸಿದರು.

ಸದ್ಯ ರಾಜ್ಯದಲ್ಲಿ ಯುರಿಯಾ ಗೊಬ್ಬರದ ಕೊರತೆ ಇಲ್ಲ. ಕೊರತೆ ಇರುವ ಗೊಬ್ಬರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿ ಅಗಿರುವ  ಬಗ್ಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಶೇ 90ರಷ್ಟು ಜನತೆಗೆ ಮೊದಲ ಹಂತದ ಲಸಿಕೆಯನ್ನೂ, ಶೇ 70ರಷ್ಟು ಅರ್ಹರಿಗೆ ಎರಡನೇ ಹಂತದ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ ಎಂದು  ಬೊಮ್ಮಾಯಿ ತಿಳಿಸಿದರು.

ಈಗ ರಾಜ್ಯದಲ್ಲಿ 51 ಲಕ್ಷ ಡೋಸ್ ಲಸಿಕೆ ಸಂಗ್ರಹ ಇದೆ ಎಂದೂ ಅವರು ವಿವರಿಸಿದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು