ನವದೆಹಲಿ: ಬಾಟ್ಲಾ ಹೌಸ್ ಎನ್‌ಕೌಂಟರ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿಅರಿಜ್ ಖಾನ್‌ನನ್ನು ತಪ್ಪಿತಸ್ಥ ಎಂದು ಪರಿಗಣಿಸಿರುವ ದೆಹಲಿ ನ್ಯಾಯಾಲಯವು ಈತನ ಶಿಕ್ಷೆಯ ಪ್ರಮಾಣದ ತೀರ್ಪನ್ನು ಇಂದು ಸಂಜೆ 4 ಗಂಟೆಗೆ ಕಾಯ್ದಿರಿಸಿದೆ.

ಬಾಟ್ಲಾ ಹೌಸ್ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆ ಮತ್ತು ಇತರ ಅಪರಾಧಗಳಲ್ಲಿ ಅರಿಜ್ ಖಾನ್‌ನನ್ನು ನ್ಯಾಯಾಲಯವು ತಪ್ಪಿತಸ್ಥ ಎಂದು ಗುರುತಿಸಿದೆ.

‘ಆರೋಪಿಗೆ ಮರಣದಂಡನೆಯನ್ನು ನೀಡಬೇಕು’ ಎಂದು ಪೊಲೀಸರ ಪರ ಹೆಚ್ಚುವರಿ ಸಾರ್ವಜನಿಕ ಅಭಿಯೋಜಕ ಎ.ಟಿ ಅನ್ಸಾರಿ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ಅರಿಜ್ ಖಾನ್ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾರ್ಚ್ 8 ರಂದು ವಿಚಾರಣೆ ನಡೆಸಿದ ನ್ಯಾಯಾಲಯವು ‘ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಸಿ.ಶರ್ಮಾ ಅವರ ಹತ್ಯೆ ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಗುಂಡಿನ ದಾಳಿ ಪ್ರಕರಣಗಳಲ್ಲಿ ಅರಿಜ್ ಖಾನ್ ಮತ್ತು ಆತನ ಸಹಚರರನ್ನು ತಪ್ಪಿತಸ್ಥ’ ಎಂದು ತೀರ್ಪು ನೀಡಿತ್ತು.

2008ರಲ್ಲಿ ದಕ್ಷಿಣ ದೆಹಲಿಯ ಜಾಮಿಯಾ ನಗರದಲ್ಲಿ ನಡೆದ ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ದೆಹಲಿಯ ವಿಶೇಷ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್ ಶರ್ಮಾ ಅವರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.