ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಬ್ಯಾಟರಿ ಚಾಲಿತ ವಾಹನಗಳಿಗೆ ನೋಂದಣಿ ಶುಲ್ಕ ವಿನಾಯಿತಿ

ದೆಹಲಿ ಸರ್ಕಾರದ ಹೊಸ ಯೋಜನೆ
Last Updated 16 ಅಕ್ಟೋಬರ್ 2020, 9:13 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಸರ್ಕಾರ ವಿದ್ಯುತ್‌ ಚಾಲಿತ ವಾಹನ ನೀತಿಯಡಿ ಬ್ಯಾಟರಿ ಚಾಲಿತ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಿದೆ ಎಂದು ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್‌ ಶುಕ್ರವಾರ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಕೈಲಾಶ್, ‘ಅಭಿನಂದನೆಗಳು ದೆಹಲಿ! ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೊಟ್ಟ ಮಾತಿನಂತೆ, ದೆಹಲಿ ಸರ್ಕಾರ ಬ್ಯಾಟರಿ ಚಾಲಿತ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಿದೆ‘ ಎಂದು ಪೋಸ್ಟ್‌ ಮಾಡಿದ್ದಾರೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಆಗಸ್ಟ್‌ನಲ್ಲಿ ವಿದ್ಯುತ್ ಚಾಲಿತ ವಾಹನಗಳ ನೀತಿಯನ್ನು ಪ್ರಕಟಿಸಿದ್ದರು. ಆ ವೇಳೆ ಅವರು ನಾಲ್ಕು ಚಕ್ರದ ವಾಹನಗಳ ಖರೀದಿಗೆ ₹ 1.5 ಲಕ್ಷದವರೆಗೂ, ದ್ವಿಚಕ್ರ ವಾಹನ , ಆಟೊರಿಕ್ಷಾ, ಇ–ರಿಕ್ಷಾ ಮತ್ತು ಸರಕು ಸಾಗಣೆ ವಾಹನಗಳ ಖರೀದಿಗೆ₹ 30 ಸಾವಿರದವರೆಗೂ ಪ್ರೋತ್ಸಾಹಧನ ನೀಡುವುದರ ಜತೆಗೆ, ರಸ್ತೆ ತೆರಿಗೆ ಮನ್ನಾ ಹಾಗೂ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡುವುದಾಗಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT