ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಿಲೇಶ್ ಯಾದವ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಬಘೇಲ್ ಕಣಕ್ಕೆ

Last Updated 31 ಜನವರಿ 2022, 11:56 IST
ಅಕ್ಷರ ಗಾತ್ರ

ಲಖನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ಕರ್ಹಾಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಎಸ್.ಪಿ.ಸಿಂಗ್ ಬಘೇಲ್ ಕಣಕ್ಕಿಳಿಯಲಿದ್ದಾರೆ.

ಅಖಿಲೇಶ್ ಯಾದವ್ ಅವರು ಸೋಮವಾರ ಮೈನ್‌ಪುರಿಯಲ್ಲಿ ನಾಮಪತ್ರ ಸಲ್ಲಿಸಿದ ಒಂದು ಗಂಟೆಯ ನಂತರ ಬಘೇಲ್ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ವಿಶೇಷ ಎಂದರೆ, ಬಘೇಲ್ ಅವರು ತಮ್ಮ ರಾಜಕೀಯ ವೃತ್ತಿ ಜೀವನ ಆರಂಭಿಸುವ ಮುನ್ನ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಭದ್ರತಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಉತ್ತರ ಪ್ರದೇಶದ ಪೊಲೀಸ್‌ ಇಲಾಖೆಯಲ್ಲಿ ಸಬ್‌ಇನ್‌ಸ್ಪೆಕ್ಟರ್, ಮಿಲಿಟರಿ ವಿಜ್ಞಾನದ ಪ್ರಾಧ್ಯಾಪಕ ಮತ್ತು ಐದು ಬಾರಿ ಸಂಸದರಾಗಿರುವ ಬಘೇಲ್ ಅವರು ತಮ್ಮ ವೃತ್ತಿಜೀವನದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಔರ್ರೈಯಾ ಜಿಲ್ಲೆಯವರಾದ ಬಘೇಲ್ ಅವರು ತಮ್ಮ ವಾಕ್ಚಾತುರ್ಯ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು 1998, 1999 ಮತ್ತು 2004 ರಲ್ಲಿ ಸಮಾಜವಾದಿ ಪಕ್ಷದಿಂದ ಸಂಸದರಾಗಿ ಜಲೇಸರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2009 ರಲ್ಲಿ ಬಘೇಲ್ ಅವರು ಬಹುಜನ ಸಮಾಜ ಪಕ್ಷಕ್ಕೆ (BSP) ಸೇರಿದರು ಮತ್ತು ರಾಜ್ಯಸಭೆಗೆ ನಾಮನಿರ್ದೇಶನಗೊಂಡರು.

ಆದರೆ, 2014 ರಲ್ಲಿ ಫಿರೋಜಾಬಾದ್‌ನಿಂದ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ಬಘೇಲ್ ಬಿಎಸ್‌ಪಿ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದಾದ ಕೆಲವೇ ದಿನಗಳಲ್ಲಿ ಅವರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡರು. 2015 ರಲ್ಲಿ ಅವರನ್ನು ಬಿಜೆಪಿ ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

2017 ರಲ್ಲಿ, ಅವರು ತುಂಡ್ಲಾದಿಂದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದರು ಮತ್ತು ಯೋಗಿ ಆದಿತ್ಯನಾಥ್ ಅವರ ಸಂಪುಟದಲ್ಲಿ (ಪಶುಸಂಗೋಪನೆ) ಸಚಿವರಾಗಿ ಸೇವೆ ಸಲ್ಲಿಸಿದ್ದರು.

2019 ರಲ್ಲಿ ಅವರನ್ನು ಆಗ್ರಾ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿತು. ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಖ್ಯಸ್ಥರಾಗಿರುವ ರಾಮ್ ಶಂಕರ್ ಕಥೇರಿಯಾ ಅವರ ಎದುರಿಗೆ ಬಘೇಲ್ ಅವರು ಎರಡು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT