ಲಖನೌ: ರಾಜಕಾರಣಿ ಎಂದರೆ ಜನರನ್ನು ಲೂಟಿ ಮಾಡುವುದಲ್ಲ, ಜನರ ಮೇಲೆ ಫಾರ್ಚುನರ್ ಹರಿಸುವುದಲ್ಲ ಎಂದು ಬಿಜೆಪಿ ಉತ್ತರ ಪ್ರದೇಶ ಘಟಕದಅಧ್ಯಕ್ಷಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.
ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಒಬ್ಬರ ನಡವಳಿಕೆಯ ಆಧಾರದ ಮೇಲೆ ಚುನಾವಣೆ ಗೆಲ್ಲಬೇಕು. ರಾಜಕೀಯ ಎಂದರೆ ನಿಮ್ಮ ಸಮಾಜ ಮತ್ತು ನಿಮ್ಮ ರಾಷ್ಟ್ರದ ಸೇವೆ. ಇದರಲ್ಲಿ ಯಾವುದೇ ಜಾತಿ ಮತ್ತು ಧರ್ಮದ ಸಂಬಂಧವಿಲ್ಲ. ರಾಜಕೀಯ ನಾಯಕರಾಗಿರುವುದು ಎಂದರೆ ಲೂಟಿ ಮಾಡುವುದಲ್ಲ. ಫಾರ್ಚುನರ್ ಅನ್ನು ಯಾರ ಮೇಲಾದರೂ ಹರಿಸುವುದಲ್ಲ. ಬಡವರ ಸೇವೆಗಾಗಿ ನಾವು ಈ ಪಕ್ಷದಲ್ಲಿದ್ದೇವೆ,’ ಎಂದು ಅವರು ಹೇಳಿದರು.
ಉತ್ತರ ಪ್ರದೇಶದ ಲಖಿಂಪುರ ಖೇರಿ ಎಂಬಲ್ಲಿ ಇತ್ತೀಚೆಗೆ ಪ್ರತಿಭಟನಾ ನಿರತ ರೈತರ ಮೇಲೆ ಎಸ್‌ಯುವಿಯೊಂದು ಹರಿದು, ನಾಲ್ವರು ರೈತರು ಮೃತಪಟ್ಟಿದ್ದರು. ರೈತರ ಮೇಲೆ ಹರಿದ ಎಸ್‌ಯುವಿಯನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಚಲಾಯಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದೇ ಆರೋಪದ ಹಿನ್ನೆಲೆಯಲ್ಲಿ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಲಖಿಂಪುರ್ ಹಿಂಸಾಚಾರವು ದೇಶದಲ್ಲಿ ರಾಜಕೀಯವಿವಾದಕ್ಕೆ ಕಾರಣವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.