ನವದೆಹಲಿ: ಬೆಳಗಾವಿ ಗಡಿ ವಿವಾದ ಸಂಬಂಧ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಸುಪ್ರಿಯಾ ಸುಳೆ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಲೋಕಸಭೆಯ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಅವರು, ಗೃಹ ಸಚಿವ ಅಮಿತ್ ಶಾ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಮುಖ್ಯಮಂತ್ರಿ ಮಹಾರಾಷ್ಟ್ರದ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕಳೆದ 10 ದಿನಗಳಿಂದ ಮಹಾರಾಷ್ಟ್ರವನ್ನು ಒಡೆಯಲು ಸಂಚು ರೂಪಿಸಲಾಗಿದೆ ಎಂದು ಸುಪ್ರಿಯಾ ಸುಳೆ ಆರೋಪಿಸಿದರು.

ಎರಡೂ ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ಗಡಿಯಲ್ಲಿ ಮಹಾರಾಷ್ಟ್ರದ ಜನರಿಗೆ ಥಳಿಸಲಾಗಿದೆ. ಇದನ್ನು ಸಹಿಸಲಾಗುವುದಿಲ್ಲ. ಕೂಡಲೇ ಗೃಹ ಸಚಿವರು ಮಧ್ಯಪ್ರವೇಶ ಮಾಡಬೇಕು ಎಂದರು.

ಸುಪ್ರಿಯಾ ಸುಳೆ ಅವರ ಈ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕದ ಬಿಜೆಪಿ ಸದಸ್ಯ ಶಿವಕುಮಾರ್ ಉದಾಸಿ, ಪ್ರಕರಣ ನ್ಯಾಯಾಲಯದಲ್ಲಿ ಇದೆ. ಹೀಗಾಗಿ ಮಹಾರಾಷ್ಟ್ರದ ಯಾವುದೇ ಸದಸ್ಯರಿಗೆ ಮಾತನಾಡಲು ಅವಕಾಶ ನೀಡಬೇಡಿ ಎಂದು ಮನವಿ ಮಾಡಿದರು.

ಎರಡೂ ರಾಜ್ಯಗಳ ನಡುವೆ ಇರುವ ಸೂಕ್ಷ್ಮ ವಿಚಾರವಾಗಿದ್ದು, ಎಲ್ಲಾ ವಿಷಯವನ್ನು ಸದನದಲ್ಲಿ ಮಾತನಾಡಲು ಸಾಧ್ಯವಿಲ್ಲ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಇದರಿಂದ ಅಸಮಾಧಾನಿತರಾದ ಎನ್ಸಿಪಿ ಸದಸ್ಯರು ಸದನದಿಂದ ಹೊರನಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.