ಗುರುವಾರ , ಡಿಸೆಂಬರ್ 8, 2022
18 °C

ಮಹಾರಾಷ್ಟ್ರದ ಒಂದಿಂಚೂ ಭೂಮಿಯನ್ನು ಬಿಡೆವು: ಏಕನಾಥ ಶಿಂದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬಯಿ: ‘ಮಹಾರಾಷ್ಟ್ರದ ಒಂದಿಂಚೂ ಭೂಮಿಯನ್ನು ಯಾರಿಗೂ ಬಿಟ್ಟು ಕೊಡುವುದಿಲ್ಲ‘ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ.‌

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್‌ ತಾಲೂಕಿನ ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎನ್ನುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಶಿಂದೆ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.

ನಾವು ಗಡಿ ಭಾಗದಲ್ಲಿರುವ ಮರಾಠಿ ಭಾಷಿಕರಿಗೆ ನ್ಯಾಯ ಒದಗಿಸಲು ನಾವು ಎಲ್ಲಾ ರೀತಿಯ ಕೆಲಸ ಮಾಡುತ್ತಿದ್ದೇವೆ. ಮಹಾರಾಷ್ಟ್ರದ ಒಂದಿಂಚೂ ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ‘ ಎಂದು ಶಿಂದೆ ಹೇಳಿದ್ದಾರೆ.

‘ಗಡಿಯಲ್ಲಿರುವ 40 ಗ್ರಾಮಗಳ ಸಮಸ್ಯೆಯನ್ನು ಬಗೆಹರಿಸುವುದು ನಮ್ಮ ಸರ್ಕಾರದ ಜವಾವ್ದಾರಿ‘ ಎಂದು ಶಿಂದೆ ಹೇಳಿದ್ದಾರೆ.

ಗಡಿಭಾಗದಲ್ಲಿರುವ ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರುವುದಾಗಿ ನಿರ್ಣಯ ಮಾಡಿದ್ದವು.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಮಗೆ ಸೇರಬೇಕು ಎನ್ನುವುದು ಮಹಾರಾಷ್ಟ್ರ ಸರ್ಕಾರದ ವಾದ. ಸದ್ಯ ಈ ವ್ಯಾಜ್ಯ ಸು‍ಪ್ರೀಂ ಕೋರ್ಟ್‌ನಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು