ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ| ಮಮತಾ ಬ್ಯಾನರ್ಜಿ ವಿರುದ್ಧ ಟೀಕೆ: ಕಾಂಗ್ರೆಸ್ ವಕ್ತಾರ ಬಂಧನ

Last Updated 4 ಮಾರ್ಚ್ 2023, 13:36 IST
ಅಕ್ಷರ ಗಾತ್ರ

ಕೋಲ್ಕತ್ತ: ‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಹೇಳಿಕೆ ನೀಡಿದ ಕಾರಣಕ್ಕಾಗಿ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಶನಿವಾರ ಮುಂಜಾನೆ ಅವರ ನಿವಾಸದಲ್ಲಿಯೇ ಬಂಧಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬರಾಕ್‌ಪೋರ್‌ನಲ್ಲಿರುವ ಬಾಗ್ಚಿ ಅವರ ನಿವಾಸದ ಮೇಲೆ ಶನಿವಾರ ಮುಂಜಾನೆ 3.30ರ ಸುಮಾರಿಗೆ ಬುರ್ಟೊಲ್ಲಾ ಠಾಣೆಯ ಪೊಲೀಸರ ತಂಡವು ದಾಳಿ ನಡೆಸಿ ಅವರನ್ನು ಬಂಧಿಸಿದೆ’ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅವರ ವಿರುದ್ಧ ಹೇಳಿಕೆ ನೀಡಿದ್ದಾರೆಂದು ಬಾಗ್ಚಿ ವಿರುದ್ಧ ಬುರ್ಟೊಲ್ಲಾ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿತ್ತು.

ಬಾಗ್ಚಿ ಅವರ ಬಂಧನದ ಬಳಿಕ ಬುರ್ಟೊಲ್ಲಾ ಪೊಲೀಸ್ ಠಾಣೆಯ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

‘ಸಾಗರ್‌ದಿಘಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಬಳಿಕ, ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರ ವಿರುದ್ಧ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವೈಯಕ್ತಿಕ ನೆಲೆಯಲ್ಲಿ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಬಾಗ್ಚಿ ಹೇಳಿಕೆ ನೀಡಿದ್ದರು’ ಎಂದು ಬಾಗ್ಚಿ ಪರ ವಕೀಲರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT