ಬುಧವಾರ, ಸೆಪ್ಟೆಂಬರ್ 29, 2021
20 °C

ಕೋವಿಡ್‌-19: ಪಶ್ಚಿಮ ಬಂಗಾಳದಲ್ಲಿ ಆಗಸ್ಟ್‌ 15ರವರೆಗೆ ನಿರ್ಬಂಧ ಮುಂದುವರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಕೋವಿಡ್ ಮೂರನೇ ಅಲೆ ಕುರಿತು ತಜ್ಞರು ನೀಡಿರುವ ಎಚ್ಚರಿಕೆಯನ್ನು ಆಧರಿಸಿ, ಪಶ್ಚಿಮ ಬಂಗಾಳ ಸರ್ಕಾರವು ಸದ್ಯ ಜಾರಿಯಲ್ಲಿರುವ ನಿರ್ಬಂಧಗಳನ್ನು ಆಗಸ್ಟ್ 15ರವರೆಗೆ ವಿಸ್ತರಿಸಿದೆ. ಆದರೆ, ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ.

ಕಳೆದ ಮೇ 16ರಂದು ಕೋವಿಡ್‌ ನಿರ್ಬಂಧಗಳನ್ನು ಜಾರಿಗೊಳಿಸಿದ್ದು, ಅದನ್ನು ಜುಲೈ 30ರವರೆಗೆ ಮುಂದುವರಿಸಲಾಗಿತ್ತು.

ಹೊಸ ಆದೇಶದ ಪ್ರಕಾರ, ಶೇ 50ರಷ್ಟು ಜನರೊಂದಿಗೆ ಒಳಾಂಗಣದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಶೇ 50ರಷ್ಟು ಪ್ರಯಾಣಿಕರೊಂದಿಗೆ ಬಸ್‌, ಟ್ಯಾಕ್ಸಿ, ಆಟೊರಿಕ್ಷಾಗಳು ಸಂಚರಿಸಬಹುದು. ಅರ್ಧದಷ್ಟು ಸಿಬ್ಬಂದಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಕಾರ್ಯನಿರ್ವಹಿಸಬಹುದು.

‘ಕೋವಿಡ್‌ ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು, ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ– 2005ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ‘ ಎಂದು ಸರ್ಕಾರ ಎಚ್ಚರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು