ಅತ್ಯಾಚಾರ ಆರೋಪ ಹಿಂಪಡೆಯುವಂತೆ ಬೆದರಿಕೆ: ಬಾಲಕಿ ಆತ್ಮಹತ್ಯೆಗೆ ಯತ್ನ

ಜಲ್‌ಪೈಗುರಿ (ಪಶ್ಚಿಮ ಬಂಗಾಳ): ‘ಜಲ್‌ಪೈಗುರಿ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಯತ್ನದಲ್ಲಿ ಬದುಕುಳಿದ 14 ವರ್ಷದ ಬಾಲಕಿಗೆ ದೂರು ಹಿಂಪಡೆಯುವಂತೆ ಬೆದರಿಕೆ ಒಡ್ಡಿದ್ದರಿಂದ ಆಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ’ ಎಂದು ಶುಕ್ರವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
‘ಬಾಲಕಿಯನ್ನು ರಕ್ಷಿಸಿ, ಜಲ್‌ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆಯ ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಗುರುವಾರ ಬಾಲಕಿಯು ಮನೆಯಲ್ಲಿ ಒಬ್ಬಳೇ ಇರುವಾಗ ಅಲ್ಲಿಗೆ ತೆರಳಿದ್ದ ಮುಸುಕುಧಾರಿ ಇಬ್ಬರು ವ್ಯಕ್ತಿಗಳು ಪೊಲೀಸ್ ದೂರು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದರು’ ಎಂದು ಅವರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಶುಕ್ರವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಬ್ಬರನ್ನೂ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.