ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

Last Updated 19 ಆಗಸ್ಟ್ 2021, 8:21 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಬಳಿಕ ನಡೆದ ಹತ್ಯೆ ಮತ್ತು ಅತ್ಯಾಚಾರದ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್‌ ಗುರುವಾರ ಆದೇಶಿಸಿದೆ.

ಜತೆಗೆ, ಚುನಾವಣೆ ಬಳಿಕ ನಡೆದಿದೆ ಎನ್ನಲಾದ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಎಲ್ಲ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆಯೂ ನ್ಯಾಯಾಲಯ ಆದೇಶ ನೀಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ಈ ಆದೇಶ ನೀಡಿದೆ. ಈ ಎರಡು ತನಿಖೆಗಳ ಬಗ್ಗೆ ನ್ಯಾಯಾಲಯವು ನಿಗಾವಹಿಸಲಿದೆ ಎಂದು ಪೀಠ ತಿಳಿಸಿದೆ. ಮುಂದಿನ ಆರು ವಾರಗಳಲ್ಲಿ ತನಿಖೆಯ ಪ್ರಗತಿಯನ್ನು ಸಲ್ಲಿಸಬೇಕು ಎಂದು ಪೀಠವು ಸಿಬಿಐಗೆ ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT